ಹುಬ್ಬಳ್ಳಿ : ತಾಲೂಕಿನ ವರೂರಿನಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಪಾರ್ಶ್ವನಾಥರಿಗೆ ವಿಶೇಷ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಕ್ಕೆ ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಪಂಚಕಲ್ಯಾಣ, ಸುಮೇರು ಪರ್ವತ ಲೋಕಾರ್ಪಣೆ ಬೆನ್ನಲ್ಲೇ ಬಹುನಿರೀಕ್ಷಿತ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಕ್ಕೆ ಲೋಕಸಭಾ ಸ್ಪೀಕರ್ ಚಾಲನೆ ನೀಡಿದರು. ಇದೇ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಇನ್ನೂ ಕಾರ್ಯಕ್ರಮದ ವೇಳೆಯಲ್ಲಿ ಮನೋಜ್ ಜೈನ್ ಸೇರಿದಂತೆ ಹಲವಾರು ಜನರಿಗೆ ಓಂ ಪ್ರಕಾಶ್ ಬಿರ್ಲಾ ಅವರು, ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
24/01/2025 04:03 pm