ಶಿವಮೊಗ್ಗ: ರೈತರ ಬೆಳೆ ನಾಶ ಮಾಡುತ್ತಿರುವ ಹಾಗೂ ರೈತರ ಜೀವ ಬಲಿ ಪಡೆಯುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಮಲೆನಾಡು ಪ್ರದೇಶದ ರೈತರು ನಗರದ ಸಿಸಿಎಫ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆನೆಗಳ ದಾಳಿಯಿಂದ ರೈತರ ಬೆಳೆ ನಷ್ಟವಾಗಿದೆ. ಆನೆಗಳ ದಾಳಿಯಿಂದ ರೈತರು ಬಲಿಯಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಣಿದ್ದೂ ಕುರುಡರಾಗಿ ವರ್ತಿಸುತ್ತಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು. ಆನೆಗಳನ್ನು ಸ್ಥಳಾಂತರಿಸದೆ ರೈತರು ಜೀವ ಭಯದಿಂದ ಬದುಕುವ ಹಾಗೆ ಮಾಡಿರುವ ಅರಣ್ಯಾಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಆನೆಗಳನ್ನು ಸ್ಥಳಾಂತರ ಮಾಡಿ ರೈತರ ಬೆಳೆಗಳನ್ನು ಉಳಿಸಬೇಕು. ಆನೆ ದಾಳಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ, ರೈತರ ಸಮಸ್ಯೆ ನೂರಾರು ಇವೆ. ಕಾಡಾನೆಗಳ ಉಪಟಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಶಾಸಕ ಆರಗ ಜ್ಞಾನೇಂದ್ರ ಕೂಡ ಕಾಡಾನೆ ಸ್ಥಳಾಂತರಕ್ಕೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿದರು.
PublicNext
24/01/2025 05:49 pm