ಪಾಟ್ನಾ: ಸಿಗರೇಟ್ ನೀಡಲು ನಿರಾಕರಿಸಿದ 65 ವರ್ಷದ ಮಹಿಳೆಯ ಮೇಲೆ ನಾಲ್ವರು ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಬಿಹಾರದ ಲಖಿಸರಾಯ್‌ನಲ್ಲಿ ನಡೆದಿದೆ. ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರನ್ನು ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಎಸ್‌ಪಿ ಅಜಯ್ ಕುಮಾರ್ ಅವರು, "ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ನವಾಬ್‌ಗಂಜ್ ಪ್ರದೇಶದ ಮಹಿಳೆಯ ಮನೆಗೆ ನಾಲ್ವರು ವ್ಯಕ್ತಿಗಳು ಸಿಗರೇಟ್ ಕೇಳಲು ಹೋಗಿದ್ದರು. ಆಕೆ ಸಿಗರೇಟ್ ಕೊಡಲು ನಿರಾಕರಿಸಿದಾಗ, ಆಕೆಯನ್ನು ಹತ್ತಿರದ ಹೊಲಕ್ಕೆ ಎಳೆದುಕೊಂಡು ಹೋದ ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ" ಎಂದು ತಿಳಿಸಿದ್ದಾರೆ.
"ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳ ಆಧಾರದ ಮೇಲೆ, ತಕ್ಷಣವೇ ಪ್ರಕರಣ ದಾಖಲಿಸಲಾಗಿದೆ. ಮತ್ತು ಗುರುವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಇಬ್ಬರನ್ನು ಪತ್ತೆಹಚ್ಚಲು ಶೋಧ ನಡೆಯುತ್ತಿದೆ. ಇನ್ನು ವೃದ್ಧ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಅಜಯ್ ಕುಮಾರ್ ಹೇಳಿದ್ದಾರೆ.
PublicNext
24/01/2025 06:28 pm