ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಕಿತ್ತಾಟ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗುತ್ತಿದೆ. ಜನಾರ್ದನ ರೆಡ್ಡಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಆಗರವಾಲ್ ವಿರುದ್ಧ ಅಸಮಾಧಾನಗೊಂಡಿರುವ ಶ್ರೀರಾಮುಲು ಪಕ್ಷ ಬಿಡುವ ಮಾತನಾಡಿದ್ದರು. ಅಲ್ಲದೆ ಈ ವಿಚಾರವಾಗಿ ಹೈಕಮಾಂಡ್ ಗಮನಕ್ಕೂ ತರುತ್ತೇನೆ ಎಂದೆಲ್ಲ ಹೇಳಿದ್ರು. ಈ ಕಿತ್ತಾಟದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿರೋದು ಕುತೂಹಲ ಮೂಡಿಸಿದೆ.
ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಯಾಗಿ ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆ ಬಗ್ಗೆ ವರದಿ ನೀಡೋ ಸಾಧ್ಯತೆ ಇದೆ. ಆದರಲ್ಲೂ ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿಯ ಕಿತ್ತಾಟದ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ನಡುವೆ ಶ್ರೀರಾಮುಲ ಸಹ ನಾಳೆ ಅಥವಾ ನಾಡಿದ್ದು ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸೇರಿದಂತೆ ಪ್ರಹ್ಲಾದ್ ಜೋಶಿ ಮತ್ತು ಬಿಎಲ್ ಸಂತೋಷ್ ಅವರನ್ನ ಸಹ ಭೇಟಿಯಾಗುವ ಸಾಧ್ಯತೆ ಇದೆ.
PublicNext
24/01/2025 07:49 pm