", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/235762-1737733059-Untitled-design---2025-01-24T210720.861.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಗದಗ: ಕಾಂಗ್ರೆಸ್‌ನವರು ಅಂಬೇಡ್ಕರ್ ಅವರಿಗೆ ಮಾಡಿರುವ ಅನ್ಯಾಯ, ಅಪಚಾರಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ತಿರು...Read more" } ", "keywords": "Gandhi, Congress dissolution, Gadag news, Indian politics, Mahatma Gandhi, non-violence, Ahimsa, Gandhian philosophy, Indian National Congress. ,Gadag,Politics", "url": "https://publicnext.com/node" } ಗದಗ: ಗಾಂಧೀಜಿ ಹೆಸರು ಹೇಳಬೇಕೆಂದರೆ ಕಾಂಗ್ರೆಸ್ ವಿಸರ್ಜನೆ ಆಗಬೇಕು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಗಾಂಧೀಜಿ ಹೆಸರು ಹೇಳಬೇಕೆಂದರೆ ಕಾಂಗ್ರೆಸ್ ವಿಸರ್ಜನೆ ಆಗಬೇಕು

ಗದಗ: ಕಾಂಗ್ರೆಸ್‌ನವರು ಅಂಬೇಡ್ಕರ್ ಅವರಿಗೆ ಮಾಡಿರುವ ಅನ್ಯಾಯ, ಅಪಚಾರಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಇಂದು ಗದಗ ಶಹರದ ವಿಠ್ಠಲಾರೂಢ ಸಭಾ ಭವನದಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಗದಗ ಹಾಗೂ ಭಾರತೀಯ ಜನತಾ ಪಾರ್ಟಿ ಗದಗ ಇವರ ವತಿಯಿಂದ ಏರ್ಪಡಿಸಿದ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಸಂವಿಧಾನ ರಚನೆಯಾಗಿ 75 ವರ್ಷ ಆಗಿದೆ. ಅದರ ಪರ ಮತ್ತು ವಿರೋಧ ಯಾರಿದ್ದಾರೆ ಅಂತ ಚರ್ಚೆ ನಡೆಯುತ್ತಿದೆ. ಸಂವಿಧಾನ ರಚನೆಯ ನಂತರ ಕಾಂಗ್ರೆಸ್ ನವರು ಆಡಳಿತ ಶುರು ಮಾಡಿ ಸಂವಿಧಾನಕ್ಕೆ ಅಪಚಾರ ಮಾಡಿರುವುದು ಚರ್ಚಾ ವಿಷಯವಾಗಿದೆ. ಇಡಿ ಜಗತ್ತಿನಲ್ಲಿ ಶ್ರೇಷ್ಠವಾಗಿರುವ ಸಂವಿಧಾನ, ಜೀವಂತವಾಗಿರುವ, ಜನರಿಗೆ ಸ್ಪಂದಿಸುವ ಸಂವಿಧಾನ ಯಾವುದಾದರೂ ಇದ್ದರೆ ಅದು ಭಾರತದ ಸಂವಿಧಾನ.

ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನ ನನ್ನ ಧರ್ಮ ಗ್ರಂಥ ಅಂತ ಹೇಳಿದರು. ಅವರು ಬಿಜೆಪಿಯವರು ಸಂವಿಧಾನ ತಿದ್ದುಪಡಿ ಮಾಡಿದ್ದೇವೆ. ಕಾಶ್ಮೀರಕ್ಕೆ ಸ್ವಾತಂತ್ರ‍್ಯ ಕೊಡಲು 370 ವಿಧಿ ರದ್ದು ಮಾಡಲು ಸಂವಿಧಾನ ತಿದ್ದುಪಡಿ ಮಾಡಿದ್ದೇವೆ. ವಾಜಪೇಯಿಯವರು ಎಸ್ಸಿ ಎಸ್ಟಿ ಆಯೋಗಕ್ಕೆ ಸಂವಿಧಾನಿಕ ಮಾನ್ಯತೆ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಒಬಿಸಿ ಆಯೋಗಕ್ಕೆ ಸಂವಿಧಾನ ಮಾನ್ಯತೆ ನೀಡಲು ತಿದ್ದುಪಡಿ ಮಾಡಿದ್ದಾರೆ.

ಶಾಸಕ ಸಿ.ಸಿ. ಪಾಟೀಲ್, ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯಎಸ್.ವಿ.ಸಂಕನೂರ ಮಾಜಿ ಶಾಸಕರಾದ ಪಿ. ರಾಜೀವ, ಕಳಕಪ್ಪ ಬಂಡಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷರಾದ ರಾಜು ಕುರಡಗಿ, ಎಸ್. ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಂಜುನಾಥ ಮುಳಗುಂದ, ಮುಖಂಡರಾದ ರವಿ ದಂಡಿನ, ಮಹೀಂದ್ರ ಕೌತಾಳ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

24/01/2025 09:09 pm

Cinque Terre

11.38 K

Cinque Terre

0

ಸಂಬಂಧಿತ ಸುದ್ದಿ