", "articleSection": "Cultural Activity,Nature", "image": { "@type": "ImageObject", "url": "https://prod.cdn.publicnext.com/s3fs-public/405356-1737773181-push.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಡಿಕೇರಿ: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯಿಂದ ನಗರದ ರಾಜಾಸೀಟ್ ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್...Read more" } ", "keywords": "Madikeri, Raja Seat, Udyanavan, Fruit and Flower Show, Omkareshwara Temple, Karnataka Tourism, Coorg Tourist Places, Indian Gardens, Nature Escapes, Hill Station Attractions,Kodagu,Cultural-Activity,Nature", "url": "https://publicnext.com/node" }
ಮಡಿಕೇರಿ: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯಿಂದ ನಗರದ ರಾಜಾಸೀಟ್ ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.
ರಾಜಾಸೀಟ್ ಉದ್ಯಾನವನದಲ್ಲಿ ನಿರ್ಮಾಣವಾಗಿರುವ ಓಂಕಾರೇಶ್ವರ ದೇವಾಲಯ ಹಾಗೂ ಕೊಡಗಿನ ಜೇನು ಸೇರಿದಂತೆ ಹಲವು ಫಲಪುಷ್ಪ ಪ್ರದರ್ಶನಗಳು ಆಕರ್ಷಣೀಯವಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಜೊತೆಗೆ ಕರ್ನಾಟಕ ಜೇನಿನ ಹಾಗೂ ಕೊಡಗು ಜೇನಿನ ‘ಕೂರ್ಗ್ ಹನಿ’ ಬ್ರಾಂಡ್ಗಳ ವಿವಿಧ ಕಲಾಕೃತಿಗಳು, ಮಕ್ಕಳು, ಮಹಿಳೆಯರಿಗೆ ಆಕರ್ಷಣೀಯ ಮನೋರಂಜನಾತ್ಮಕ ಹಾಗೂ ಫೋಟೋ ಪಾಯಿಂಟ್ಗಳ ಹೂವಿನ ವಿವಿಧ ಕಲಾಕೃತಿಗಳು, ತರಕಾರಿಗಳಿಂದ ಮಾಡಿದ ವಿವಿಧ ಬಗೆಯ ಕಲಾಕೃತಿಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಬಳಿಕ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯು ಸಹ ಬಟಾಣಿ ಗಾರ್ಡನ್ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಇದನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಸಲಹೆ ಮಾಡಿದರು.
35 ಲಕ್ಷ ರೂಪಾಯಿ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಪ್ರವಾಸಿಗರು ಸೇರಿದಂತೆ ಎಲ್ಲರೂ ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು.
PublicNext
25/01/2025 08:16 am