ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚಿತ ಆಯುಷ ಆರೋಗ್ಯ ಚಿಕಿತ್ಸಾ ಶಿಬಿರ ಹಾಗೂ ಔಷಧಿಗಳ ವಿತರಣೆ

ಗದಗ: ವಕೀಲರು ಸಮಾಜ ಸೇವೆಯಂತಹ ವೃತ್ತಿ ಜೀವನದಲ್ಲಿದ್ದು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕೆಲಸದ ಜೊತೆಗೆ ಎಲ್ಲರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಹೇಳಿದರು.

ನಗರದ ಜಿಲ್ಲಾ ನ್ಯಾಯಲಯದಲ್ಲಿ ಶನಿವಾರ ಆಯುಷ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಜಿಲ್ಲಾ ಆಯುಷ ಇಲಾಖೆ ರಾಷ್ಟ್ರೀಯ ಆಯುಷ ಅಭಿಯಾನ ಹಾಗೂ ರೂರಲ್ ಮೆಡಿಕಲ್ ಸೊಸಯಟಿ ಕೆ ಎಚ್ ಪಾಟೀಲ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಸಂಸ್ಥೆ ಹುಲಕೋಟಿ ಜಿಲ್ಲಾ ನ್ಯಾಯಾಂಗ ವಕೀಲರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಆಯುಷ ಆರೋಗ್ಯ ಚಿಕಿತ್ಸಾ ಶಿಬಿರ ಹಾಗೂ ಔಷಧಿಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ ಇಲಾಖೆ ವಕೀಲರಿಗೆ ಇಂತಹ ಆರೋಗ್ಯ ಚಿಕಿತ್ಸಾ ಶಿಬರ ಏರ್ಪಡಿಸಿದ್ದು ಉತ್ತಮ ಕಾರ್ಯವಾಗಿದೆ. ಮಾನವರು ಯಾವುದೇ ರೀತಿಯ ಸಾಧನೆ ಮಾಡಬೇಕಾದರೆ ಆರೋಗ್ಯ ಅತ್ಯವಶ್ಯಕವಾಗಿದೆ ಎಲ್ಲ ವಕೀಲರು ತಮ್ಮ ದಿನ ನಿತ್ಯದ ಒತ್ತಡದ ಬದುಕಿನಲ್ಲಿ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯ ಹೊಂದಬೇಕು ಎಂದು ಹೇಳಿದರು.

Edited By : Nirmala Aralikatti
Kshetra Samachara

Kshetra Samachara

25/01/2025 02:22 pm

Cinque Terre

4.04 K

Cinque Terre

0