", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/418299-1737798327-bali.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArunPrasadMandya" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಡ್ಯ: ಮೈಕ್ರೋಫೈನಾನ್ಸ್ ವಸೂಲಿಗಾರರ ಕಾಟ ತಡೆಯಲಾರದೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಒಳ...Read more" } ", "keywords": "Mandya News, Microfinance Harassment, Farmer Suicide, Karnataka Debt Trap, Microfinance Institutions, Youth Suicide, Agricultural Debt, Financial Crisis, Mandya District, Karnataka News.,Mandya,Crime", "url": "https://publicnext.com/node" }
ಮಂಡ್ಯ: ಮೈಕ್ರೋಫೈನಾನ್ಸ್ ವಸೂಲಿಗಾರರ ಕಾಟ ತಡೆಯಲಾರದೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಒಳಗೆರೆ ಮೆಣಸ ಗ್ರಾಮದಲ್ಲಿ ಜರುಗಿದೆ.
ವಳಗೆರೆ ಮೆಣಸ ಗ್ರಾಮದ ಲೋಹಿತ್ ಅಲಿಯಾಸ್ ನವೀನ್ (35) ಮೃತ ದುರ್ದೈವಿಯಾಗಿದ್ದು, ಈತ ವಿವಿಧ ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ವ್ಯಕ್ತಿಗಳಿಂದಲೂ ಸಾಲ ಪಡೆದಿದ್ದು, ಮೈಕ್ರೋ ಫೈನಾನ್ಸ್‌ನ ವಸೂಲಿ ತಂಡದ ಚಿತ್ರ ಹಿಂಸೆ ತಡೆದುಕೊಳ್ಳಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಕಳೆದ ವಾರ ಸಾಲಗಾರರ ಕಾಟಕ್ಕೆ ಬೇಸತ್ತು K.R.ಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲೋಹಿತ್ ದೂರು ಸಲ್ಲಿಸಿದ್ದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
25/01/2025 03:15 pm