ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಹಲವೆಡೆ ದಾಳಿ ನಡೆಸಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ

ಚಿಕ್ಕಬಳ್ಳಾಪುರ : ಜಿಲ್ಲೆಯ ಹಲವು ತಾಲೂಕುಗಳಿಂದ ವಶಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು ನಾಶಪಡಿಸುವಂತೆ ಕೋರ್ಟ್ ಆದೇಶದಂತೆ ಜಿಲ್ಲಾ ಪೊಲೀಸ್ ಇಲಾಖೆ ನಾಶಪಡಿಸಲಾಗಿದೆ. ಜಿಲ್ಲೆಯಲ್ಲಿ ಹಲವು ಕಡೆ ದಾಳಿ ನಡೆಸಿ ಇಲ್ಲಿಯವರೆಗೂ ಸುಮಾರು 24 ಕೆಜಿ 758 ಗ್ರಾಂ ನಷ್ಟು ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ತಿಳಿಸಲಾಯಿತು.

ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟವನ್ನು ತಡೆಗಟ್ಟಲು ಪ್ರತಿ ವರ್ಷ ಜೂನ್ 26ರಂದು ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪೊಲೀಸರು ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡು ಕಾಯ್ದೆ 1985ರ ಅಡಿಯಲ್ಲಿ ಪ್ರಕರಣಗಳು ದಾಖಲಿಸಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ರೀತಿ ದಾಳಿ ನಡೆಸಿ 12 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 24 ಕೆಜಿ ಗಾಂಜಾ ಅಂದಾಜು ಮೌಲ್ಯ ಸುಮಾರು 9,50,858 ರೂಗಳ ಗಾಂಜಾ ವಸ್ತುಗಳನ್ನು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿರುವ ಹೊಸಕೋಟೆ ಕೈಗಾರಿಕಾ ಎಂ ಎಸ್ ಸೆಂಚುರಿ ರಿಫೈನರಿ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಗಿರುತ್ತದೆ.

Edited By : Somashekar
Kshetra Samachara

Kshetra Samachara

25/01/2025 03:20 pm

Cinque Terre

2.3 K

Cinque Terre

0

ಸಂಬಂಧಿತ ಸುದ್ದಿ