", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/421698-1737800718-V10~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನಂಜನಗೂಡು: ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಅನ್ನು ಟಿಪ್ಪರ್ ಓವರ್‌ ಟೇಕ್ ಮಾಡುವಾಗ ಬಸ್‌ನಲ್ಲಿದ್ದ ಮಹಿಳೆಯ ಕುತ್ತಿಗೆ...Read more" } ", "keywords": "KSRTC accident, KSRTC bus accident, Karnataka bus accident, KSRTC news, KSRTC safety, KSRTC crash, Karnataka road accident, KSRTC vehicle accident, Bangalore bus accident, Mysore bus accident, KSRTC driver fault, KSRTC passenger safety.,Mysore,Accident", "url": "https://publicnext.com/node" } ನಂಜನಗೂಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ - ಬೆಚ್ಚಿಬಿದ್ದ ಸಾರ್ವಜನಿಕರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ - ಬೆಚ್ಚಿಬಿದ್ದ ಸಾರ್ವಜನಿಕರು

ನಂಜನಗೂಡು: ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಅನ್ನು ಟಿಪ್ಪರ್ ಓವರ್‌ ಟೇಕ್ ಮಾಡುವಾಗ ಬಸ್‌ನಲ್ಲಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ನಡೆದಿದೆ.

ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ 43 ವರ್ಷದ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮೈಸೂರು ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಮೃತ ಮಹಿಳೆ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದರು. ಸಿಂಧುವಳ್ಳಿ ಗ್ರಾಮದ ಬಳಿ ಬಸ್‌ನ ಕಿಟಕಿಯಿಂದ ಮಹಿಳೆ ಕತ್ತನ್ನು ಹೊರ ಹಾಕಿದಾಗಲೇ ಟಿಪ್ಪರ್ ಓವರ್‌ ಟೇಕ್‌ ಮಾಡಿದೆ. ಪರಿಣಾಮ ಕ್ಷಣಾರ್ಧದಲ್ಲೇ ಅಪಘಾತವಾದ ಪರಿಣಾಮ ಬಸ್ಸಿನಲ್ಲಿ ಕುಳಿತಿದ್ದ ಶಿವಲಿಂಗಮ್ಮ ಎಂಬುವರ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಅಪಘಾತ ನಡೆದ ಸ್ಥಳದಿಂದ ಚಾಲಕ ಟಿಪ್ಪರ್ ಸಮೇತ ಎಸ್ಕೇಪ್ ಆಗಿದ್ದಾನೆ.

ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿಯಾದ ಮಹೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಾರಿಗೆ ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾಗಿರುವ ಟಿಪ್ಪರ್ ವಾಹನವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಮೃತ ಮಹಿಳೆಯ ಶವವನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Suman K
PublicNext

PublicNext

25/01/2025 03:55 pm

Cinque Terre

26.79 K

Cinque Terre

0

ಸಂಬಂಧಿತ ಸುದ್ದಿ