", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/38659820250125035754filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮಕೂರು: ಮಾರ್ಚ್ 21ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು ಮಕ್ಕಳ ವಿದ್ಯಾಭ್ಯಾಸದ ಕಡೆ ಶಿಕ್ಷಕರು ಗಮನ ಕೊಟ್ಟು ಈ ವರ್ಷ ಜಿಲ್ಲೆಯಲ್ಲ...Read more" } ", "keywords": "Node,Tumkur,News", "url": "https://publicnext.com/node" } ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲೆ ಶೇ 100 ಪಲಿತಾಂಶ ತರಲು ಶಿಕ್ಷಕರು ಶ್ರಮಿಸಬೇಕು: ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು....
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲೆ ಶೇ 100 ಪಲಿತಾಂಶ ತರಲು ಶಿಕ್ಷಕರು ಶ್ರಮಿಸಬೇಕು: ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು....

ಮಕೂರು: ಮಾರ್ಚ್ 21ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು ಮಕ್ಕಳ ವಿದ್ಯಾಭ್ಯಾಸದ ಕಡೆ ಶಿಕ್ಷಕರು ಗಮನ ಕೊಟ್ಟು ಈ ವರ್ಷ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಪಾಠ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಪ್ರತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಕುಂಠಿತವಾಗಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಹುಪಾಲು ಮಕ್ಕಳು ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ಹಿಂದುಳಿದಿದ್ದು, ಅಂತಹ ಮಕ್ಕಳಿಗೆ ಪ್ರತ್ಯೇಕ ತರಗತಿಗಳನ್ನು ನೀಡಿ ತೇರ್ಗಡೆಯಾಗುವಂತೆ ಮನದಟ್ಟು ಮಾಡಬೇಕು ಎಂದರು.

ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳ ವಿದ್ಯಾಭ್ಯಾಸ ಮತ್ತು ಕಲಿಕೆಯ ಬಗ್ಗೆ ಶಿಕ್ಷಕರು ವೈಯಕ್ತಿಕವಾಗಿ ವಿದ್ಯಾರ್ಥಿಗಳನ್ನು ವಿಶ್ಲೇಷಣೆ ಮಾಡಿ ಯಾವ ವಿಷಯದಲ್ಲಿ ಮಕ್ಕಳು ಹಿಂದುಳಿದಿದ್ದಾರೆ ಎಂದು ಪಟ್ಟಿ ತಯಾರಿಸಬೇಕು. ಅಂತಹ ಮಕ್ಕಳಿಗೆ ವಿಶೇಷ ತರಗತಿಗನ್ನು ನೀಡಿ ಓದಿನಲ್ಲಿ ಮುಂದೆ ಬರುವಂತೆ ಮಾಡಬೇಕು ಎಂದರು.

ಮಕ್ಕಳಿಗೆ ಶಾಲೆಯಲ್ಲಿ ಕಲಿಯುವ ಪಾಠದ ಜೊತೆ ಹೊರಗಿನ ಪ್ರಪಂಚದಲ್ಲಿ ನಡೆಯುವ ವಿದ್ಯಾಮಾನಗಳ ಅರಿವು ಇರಬೇಕು. ಈ ದೃಷ್ಟಿಕೋನದಿಂದ ಜಿಲ್ಲೆಯಲ್ಲಿಅನುಭವಾತ್ಮಕ ಕಲಿಕೆ ಪರಿಕಲ್ಪನೆಯನ್ನು ತರಲಾಗಿದೆ. ಮಕ್ಕಳಿಗೆ ವಿವಿಧ ಇಲಾಖೆಗಳ ಬಗ್ಗೆ ಮಾಹಿತಿ ನೀಡಬೇಕು. ಕ್ಷೇತ್ರಭೇಟಿ ಮಾಡಿಸಿ ನೇರವಾಗಿ ಅನುಭವಾತ್ಮಕವಾಗಿ ಪಾಠ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶಾಲೆಗಳಿಗೆ ಬೇಕಾಗುವ ಮೂಲಭೂತ ಸೌಕರ್ಯಗಳಡಿ 3076 ಶಾಲಾಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, 1232 ಕಾಮಗಾರಿಗಳು ಈಗಾಗಲೇ ಮುಕ್ತಾಯಗೊಂಡಿದ್ದು, 1347 ಕಾಮಗಾರಿಗಳು ಪ್ರಗತಿಯಲ್ಲಿವೆ.

ಶಾಲೆಗಳಿಗೆ ಬೇಕಾಗುವ ಮೂಲಭೂತ ಸೌಕರ್ಯಗಳ ಬಗ್ಗೆ ತಾಂತ್ರಿಕ ಸಿಬ್ಬಂದಿಯಿಂದ ಮೌಲ್ಯಮಾಪನ ಮಾಡಿಸಲಾಗಿದ್ದು, ಶಾಲೆಗಳಿಗೆ ಬೇಕಾಗುವ ಕಾಂಪೌಂಡ್, ಆಟದ ಮೈದಾನ, ಶೌಚಾಲಯ, ಶಾಲಾ ಕೊಠಡಿ, ಮೇಲ್ಚಾವಣಿ, ಸುಣ್ಣ ಬಣ್ಣ ಸೇರಿದಂತೆ  ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಮೌಲ್ಯಮಾಪನ ಮಾಡಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಅಭಿವೃದ್ದಿ) ಸಂಜೀವಪ್ಪ, ಉಪ ಕಾರ್ಯದರ್ಶಿ (ಆಡಳಿತ) ಹಾಲಸಿದ್ದಪ್ಪ ಪೂಜೇರಿ, ಶಾಲಾ ಶಿಕ್ಷಣ ಇಲಾಖೆ ಮಧುಗಿರಿ ವಿಭಾಗದ ಉಪ ನಿರ್ದೇಶಕರಾದ ಗಿರಿಜಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. 

Edited By : PublicNext Desk
Kshetra Samachara

Kshetra Samachara

25/01/2025 03:57 pm

Cinque Terre

6.32 K

Cinque Terre

0