ಗದಗ. ಸಂವಿಧಾನವು ಒಂದು ಪುಸ್ತಕವಲ್ಲ. ಅದು ಭಾರತವನ್ನು ಮುನ್ನಡೆಸುವ ಒಂದು ಶಕ್ತಿ. ಅಂತಹ ಸಂವಿಧಾನದ ಕುರಿತು ಅರಿಯಬೇಕಾದ್ದು ಪ್ರತಿಯೊಬ್ಬರ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮ ಸಂಘಟಿಸಲಾಗಿದೆ" ಎಂದು ಲಕ್ಷ್ಮೇಶ್ವರ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ ಅಭಿಪ್ರಾಯಪಟ್ಟರು.
ಅವರು 76 ನೇ ಗಣರಾಜ್ಯೋತ್ಸವದ ಪ್ರಯುಕ್ತ ತಾಲೂಕಾ ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ ಸಹಯೋಗದಲ್ಲಿ ಲಕ್ಷ್ಮೇಶ್ವರ ಉತ್ತರ ಸಿ.ಆರ್.ಸಿ ಕೇಂದ್ರದಲ್ಲಿ ಭಾರತದ ಸಂವಿಧಾನ ವಿಷಯದ ಕುರಿತು ಹಮ್ಮಿಕೊಂಡ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ ಮುಖ್ಯೋಪಾಧ್ಯಾಯ ಡಿ.ಎನ್.ದೊಡ್ಡಮನಿ "ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ವಿದ್ಯಾರ್ಥಿಗಳ ಬುದ್ಧಿವಂತಿಕೆಗೆ ಸಾಣೆ ಹಿಡಿದಂತೆ" ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಧ್ಯಮಿಕ ನೌಕರ ಸಂಘದ ತಾಲೂಕಾಧ್ಯಕ್ಷ ಎಲ್.ಎಸ್.ಅರಳಿಹಳ್ಳಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಡಿ.ಲಮಾಣಿ ಮಾತನಾಡಿದರು.
ಪ್ರೌಢಶಾಲಾ ವಿಭಾಗದ ಬಿ.ಆರ್.ಪಿ ಈಶ್ವರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸರಕಾರಿ ಪ್ರೌಢಶಾಲೆ ಮಾಡಳ್ಳಿಯ ಶಿಕ್ಷಕ ಅಕ್ಬರಸಾಬ ನದಾಫ ರಸಪ್ರಶ್ನೆ ಸ್ಪರ್ಧೆಯ ನಿರ್ವಹಣೆ ಮಾಡಿದರು.
Kshetra Samachara
25/01/2025 04:19 pm