", "articleSection": "Education", "image": { "@type": "ImageObject", "url": "https://prod.cdn.publicnext.com/s3fs-public/41631820250125051347filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Divakar Siddapur" }, "editor": { "@type": "Person", "name": "7022522554" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಸಿದ್ದಾಪುರ : ತಾಲೂಕಿನ ದೊಡ್ಮನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗ್ರ...Read more" } ", "keywords": "Node,Uttara-Kannada,Education", "url": "https://publicnext.com/node" }
ಸಿದ್ದಾಪುರ : ತಾಲೂಕಿನ ದೊಡ್ಮನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಉಮೇಶ ಗೌಡರ್ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿನ ವಿಜ್ಞಾನ ಕೌಶಲ್ಯ ಶ್ಲಾಘನೀಯ, ನಾವು ಯಾವುದಾದರು ಪ್ರಯತ್ನದಲ್ಲಿ ತೊಡಗಿಕೊಂಡಾಗ ವಿಷಯದ ಕುರಿತಾದ ಅನುಭವ ಸಿಗುತ್ತದೆ, ಹೊಸ ಹೊಸ ವಿಷಯದಲ್ಲಿ ಪ್ರಯತ್ನವಿದ್ದಾಗ ಜ್ಞಾನ ಹೆಚ್ಚಾಗುತ್ತದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ಪ್ರದರ್ಶಿಸಿರುವುದು ಹೆಮ್ಮೆಯ ಸಂಗತಿ ಎಂದರು. ಪ್ರಾ ಶಾ ಶಿ ಸಂಘದ ತಾಲೂಕ ಅಧ್ಯಕ್ಷ ಸತೀಶ ಹೆಗಡೆ ಮಾತನಾಡಿ ಶಿಕ್ಷಕರ ಮತ್ತು ವಿದ್ಯಾರ್ಥಿ ಗಳ ಪ್ರಯತ್ನ ಉಳಿದವರಿಗೆ
ಮಾದರಿಯಾಗಿದೆ ಎಂದರು.
ಎಸ್ ಡಿ ಎಂ.ಸಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಲೆಗೆ ನಿರಂತರವಾಗಿ ಸಹಕರಿಸುತ್ತಿರುವ ಅಮ್ಮಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ಶಾಂತಕುಮಾರ ಭಟ್ ಕೊಡುಗೆಗಳನ್ನು ತಿಳಿಸಿದರು. ನಾವೆಲ್ಲರೂ ಸೇರಿ ನಮ್ಮೂರ ಶಾಲೆಯನ್ನು ಮಾದರಿ ಶಾಲೆ ನಾಗಿಸೋಣ ಎಂದರು.
ಪ್ರತಿಭಾ ಪುರಸ್ಕಾರದಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು ,ಕಲಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ದತ್ತಿನಿದಿ ನೀಡಿ ಪ್ರೋತ್ಸಾಹದ ಮಾತುಗಳನ್ನಾಡಿ ಹುರಿದುಂಬಿಸಲಾಯಿತು.
ನಂತರ ನಡೆದ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಸಮೂಹ ನೃತ್ಯ, ಕಿರು ನಾಟಕ ಪ್ರದರ್ಶಿಸಿ ಜನರ ಮೆಚ್ಚುಗೆ ಗಳಿಸಿದರು.
ವೇದಿಕೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಸಾಧನ ಭಟ್, ಭಾಸ್ಕರ ಗೌಡ ಸಿಆರ್‌ಪಿ ಬಾಸ್ಕರ ಮಡಿವಾಳ, ದೊಡ್ಮನೆ ಹೈ ಸ್ಕೂಲ್ ಮುಖ್ಯಧ್ಯಾಪಕ ಎಫ್ ಎನ್ ಹರನಗಿರಿ, ಮಮತಾ ಗೌಡ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಎಂ.ಐ ಹೆಗಡೆ ಸ್ವಾಗತಿಸಿದರು. ಶಿಕ್ಷಕಿ ಗಿರಿಜಾ ಭಟ್ ವರದಿ ವಾಚಿಸಿದರು. ಶಿಕ್ಷಕಿ ಜ್ಯೋತಿ ನಾಯ್ಕ್, ಭಾಗಿರತಿ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ರಮ್ಯಾ ಪಟಗಾರ ವಂದಿಸಿದರು.
Kshetra Samachara
25/01/2025 05:13 pm