", "articleSection": "Lifestyle,Entertainment,Health & Fitness", "image": { "@type": "ImageObject", "url": "https://prod.cdn.publicnext.com/s3fs-public/43124920250125072228filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "9964135886" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕಾರವಾರ: ಗ್ರಾಮ ಆಡಳಿತದ ಆಧಾರ ಸ್ಥಂಭವಾಗಿರುವ ಗ್ರಾಮ ಆಡಳಿತಾಧಿಕಾರಿಗಳು ಸಾರ್ವಜನಿಕರೊಂದಿಗೆ ಪರಸ್ಪರ ಸಹಕಾರ ಮನೋಭಾವನೆಯಿಂದ ಕಾರ್ಯ ನಿರ್ವಹಿಸ...Read more" } ", "keywords": "Node,Uttara-Kannada,Lifestyle,Entertainment,Health-and-Fitness", "url": "https://publicnext.com/node" }
ಕಾರವಾರ: ಗ್ರಾಮ ಆಡಳಿತದ ಆಧಾರ ಸ್ಥಂಭವಾಗಿರುವ ಗ್ರಾಮ ಆಡಳಿತಾಧಿಕಾರಿಗಳು ಸಾರ್ವಜನಿಕರೊಂದಿಗೆ ಪರಸ್ಪರ ಸಹಕಾರ ಮನೋಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಕರ್ನಾಟಕ ರಾಜ್ಯ ಗ್ರಾಮಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ನಡೆದ 2025 ನೇ ಸಾಲಿನ ದಿನಚರಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಡಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನು ತಮ್ಮವರು ಎಂದು ಭಾವಿಸಿದಾಗ ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತವೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ವತಿಯಿಂದ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನು ಒಂದು ಕುಟುಂಬದಂತೆ ನೋಡಲಾಗುತ್ತಿದೆ ಎಂದರು.
ಸರಕಾರವು ನಮಗೆ ಸಾರ್ವಜನಿಕರು ಕೆಲಸ ಮಾಡಲು ಅವಕಾಶ ನೀಡಿದೆ ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ತಮ್ಮಗೆ ಕರ್ತವ್ಯ ನಿರ್ವಹಿಸಲು ಏನೇ ಸಮಸ್ಯೆಗಳಿದ್ದರೂ ತಮ್ಮ ಗಮನಕ್ಕೆ ತಂದಲ್ಲಿ ಬಗೆಹರಿಸಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜು ಕುಮಾರ ನಾಯ್ಕ, ತಹಸೀಲ್ದಾರ ನಿಶ್ಚಲ್ ನೊರೊನ್ಹಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣ್ಕರ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಾಂದ ಬಾಷಾ ಮುಲ್ಲಾ, ಗ್ರಾಮಡಳಿತ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು ಮತ್ತಿತರರು ಇದ್ದರು.
Kshetra Samachara
25/01/2025 07:22 pm