ಹಾಸನ : ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ಧ್ವಜಾರೋಹಣ ನೆರೆವೇರಿಸಿದರು.
ಇದಕ್ಕೂ ಮುನ್ನ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಗಣರಾಜ್ಯೋತ್ಸವ ಕಾರ್ಯಕ್ರಮ ಹಿನ್ನೆಲೆ ವಿವಿಧ ಪೊಲೀಸ್ ತುಕಡಿಗಳು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್‌ಪಟೇಲ್, ಡಿಸಿ ಸಿ.ಸತ್ಯಭಾಮ, ಎಸ್ಪಿ ಮಹಮದ್ ಸುಜೇತಾ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಭಾಗಿಯಾಗಿದ್ದರು.
PublicNext
26/01/2025 02:26 pm