ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಸಚಿವರಿಗೆ ಘೇರಾವ್ ಹಾಕುಲು ಮುಂದಾಗಿದ್ದ ರೈತ ಮುಖಂಡರ ಬಂಧನ

ಚಾಮರಾಜನಗರ : ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಅವರಿಗೆ ಘೇರಾವ್ ಹಾಕಲು ಮುಂದಾಗಿದ್ದ ರೈತ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು.

ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದು, ಧ್ವಜಾರೋಹಣಕ್ಕೆ ಆಗಮಿಸುವ ಸಂದರ್ಭದಲ್ಲಿ ಸಚಿವರಿಗೆ ಘೇರಾವ್ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಿರ್ಧರಿಸಿದ್ದರು. ಇದನ್ನು ಅರಿತ ಪೊಲೀಸರು ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಅವರೊಂದಿಗೆ ಚರ್ಚಿಸಿ ಫೇರಾವ್ ಹಾಕದಂತೆ ಮನವೊಲಿಸಲು ಯತ್ನಿಸಿದ್ದರು. ಅಲ್ಲದೇ ಸಚಿವರೊಂದಿಗೆ ಮಾತನಾಡಲು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದರು.

ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿ ಸಭೆ ನಡೆಸಲು ಜಿಲ್ಲಾಡಳಿತ ಭವನಕ್ಕೆ ಆಗಮಿಸುವ ಸಂದರ್ಭದಲ್ಲಿ ರೈತರಿಂದ ತೊಂದರೆಯಾಗಬಾರದೆಂದು ಮುನ್ನೆಚ್ಚರಿಕೆ ಕ್ರಮವಹಿಸಿ ನಗರಕ್ಕೆ ಆಗಮಿಸಿದ ಹೊನ್ನೂರು ಬಸವಣ್ಣ ಹಾಗೂ ಸಂಘದ ಇತರೆ ಪದಾಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ಕಾಗಲವಾಡಿ ಪೊಲೀಸ್ ಉಪಠಾಣೆಗೆ ಕರೆದೊಯ್ದರು. 

ಈ ವೇಳೆ ಪೊಲೀಸರ ವಿರುದ್ಧ ರೈತ ಸಂಘದ ಮುಖಂಡರು ಆಕ್ರೋಶ ಹೊರ ಹಾಕಿದರು. ರೈತಮುಖಂಡರನ್ನು ಕೆಲ ಕಾಲ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು, ನಂತರ ಅವರನ್ನು ಬಿಡುಗಡೆ ಮಾಡಿದರು. ರೈತ ಸಂಘದ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಮುಖ್ಯಗೇಟ್ ಹಾಗೂ ಜಿಲ್ಲಾಡಳಿತ ಭವನದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

Edited By : PublicNext Desk
PublicNext

PublicNext

26/01/2025 05:13 pm

Cinque Terre

11.5 K

Cinque Terre

0

ಸಂಬಂಧಿತ ಸುದ್ದಿ