", "articleSection": "Cultural Activity,Government", "image": { "@type": "ImageObject", "url": "https://prod.cdn.publicnext.com/s3fs-public/229640-1737895469-sio.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MadhuKeshavSorab" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಂವಿಧಾನ ಪ್ರತಿಯೊಬ್ಬ ಭಾರತೀಯನ ಪಾಲಿನ ಪವಿತ್ರ ಗ್ರಂಥವಾಗಿದ್ದು, ಸಂವಿಧಾನ ರಚನೆಗೊಂಡು ಅಧಿಕೃತವಾಗಿ ಜಾರಿಗೆ ಬಂದ ದಿನವನ್ನು ದೇಶದಾದ್ಯಂತ ಅತ್ಯಂ...Read more" } ", "keywords": "Sorab, 76th Republic Day, Constitution Day, Patriotic Celebrations, Karnataka News, Indian Republic Day, National Pride, Sorab Events, Flag Hoisting Ceremony, Constitutional Values, Republic Day Celebrations.,Shimoga,Cultural-Activity,Government", "url": "https://publicnext.com/node" }
ಸಂವಿಧಾನ ಪ್ರತಿಯೊಬ್ಬ ಭಾರತೀಯನ ಪಾಲಿನ ಪವಿತ್ರ ಗ್ರಂಥವಾಗಿದ್ದು, ಸಂವಿಧಾನ ರಚನೆಗೊಂಡು ಅಧಿಕೃತವಾಗಿ ಜಾರಿಗೆ ಬಂದ ದಿನವನ್ನು ದೇಶದಾದ್ಯಂತ ಅತ್ಯಂತ ಸಂಭ್ರಮ-ಸಡಗರದಿಂದ ಗಣರಾಜ್ಯೋತ್ಸವೆಂದು ಆಚರಿಸಲಾಗುತ್ತಿದೆ ಎಂದು ತಹಶೀಲ್ದಾರ್ ಮಂಜುಳಾ ಹೆಗಡಾಳ್ ಹೇಳಿದ್ದಾರೆ.
ಭಾನುವಾರ ಪಟ್ಟಣದ ರಂಗಮಂದಿರ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಪುರಸಭೆ, ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದೊಂದಿಗೆ ಹಮ್ಮಿಕೊಂಡ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದ ತರುವಾಯ ಸಂವಿಧಾನವು ಜಾರಿಗೆ ತಂದ ದಿನವನ್ನು ದೇಶವೇ ಸಂಭ್ರಮಿಸುತ್ತದೆ. ಗಣರಾಜ್ಯೋತ್ಸವವು ಪ್ರತಿಯೊಬ್ಬ ಭಾರತೀಯರೂ ಒಗ್ಗೂಡಿ ಆಚರಿಸುವ ಹಬ್ಬವಾಗಿದೆ. ದೇಶದ ಸಂವಿಧಾನವನ್ನು ಗೌರವಿಸುವ ಜೊತೆಗೆ ಕಾನೂನುಗಳನ್ನು ಪಾಲಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಬಡವ, ಶ್ರೀಮಂತ ಎಂಬ ಬೇಧಭಾವವಿಲ್ಲದೇ ಎಲ್ಲರೂ ಕಾನೂನಿನ ಮುಂದೆ ಸರಿ ಸಮಾನರಾಗಿದ್ದಾರೆ. ಮೂಲ ಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಪ್ರತಿಯೊಬ್ಬರು ಕರ್ತವ್ಯಗಳನ್ನು ಪಾಲಿಸಬೇಕು ಪ್ರಜೆಗಳಿಂದ ಪ್ರಜೆಗಳಿಗೋಸ್ಕರ ಪ್ರಜೆಗಳೇ ಅಧಿಕಾರ ನಡೆಸುವ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬರು ಸಂವಿಧಾನವನ್ನು ಗೌರವಿಸಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರು ಆಳವಾದ ಅಧ್ಯಯನದ ಮೂಲಕ ದೇಶಕ್ಕೆ ಸಂವಿಧಾನವನ್ನು ನೀಡಿದ್ದಾರೆ. ಗಣರಾಜ್ಯೋತ್ಸವ ದಿನದಂದು ಪ್ರತಿಯೊಬ್ಬರು ಬಲಿಷ್ಠ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು ಎಂದರು.
ನಂತರ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ಸಾಂಸ್ಕೃತಿಕ ನೃತ್ಯ ರೂಪಕ ಕಾರ್ಯಕ್ರಮ ಪ್ರೇಕ್ಷಕರ ಮನಸೋರೆ ಗೊಳಿಸಿತು.
ವಿವಿಧ ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ನೌಕರರಿಗೆ 76 ನೇ ಗಣರಾಜ್ಯೋತ್ಸವದ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು
ವರದಿ: ಮಧು ರಾಮ್ ಪಬ್ಲಿಕ್ ನೆಕ್ಸ್ಟ್ ಸೊರಬ
PublicNext
26/01/2025 06:14 pm