ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಪಂಚಾಯಿತಿಗಳಲ್ಲಿ ಅಕ್ರಮ ಇ, ಬಿ ಖಾತೆ ಕಡಿವಾಣಕ್ಕೆ ರೈತ ಸಂಘ ಮನವಿ

ಮುಳಬಾಗಿಲು: ತಾಲ್ಲೂಕಿನಾದ್ಯಾಂತ ಗ್ರಾಮ ಪಂಚಾಯಿತಿಗಳಲ್ಲಿ ಅಕ್ರಮ ಇ ಹಾಗೂ ಬಿ ಖಾತೆಗಳ ಆಕ್ರಮ ಹಾಗೂ ನರೇಗಾದ ಕಾಮಗಾರಿಗಳಲ್ಲಿ ನಡೆದಿರುವ ಭ್ರಷ್ಟಚಾರವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಲು ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳಾದ ಸರ್ವೇಶ್‌ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಇದೇ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ನರೇಗಾ ಕಾಮಗಾರಿಗಳಲ್ಲಿ ಜೆ,ಸಿ,ಬಿಗಳ ಅಬ್ಬರ ಜಾಬ್ ಕಾರ್ಡ್ಗಳ ದುರ್ಬಳಕೆ ಹೆಚ್ಚಾಗಿದೆ ದುಡಿಯುವ ಕೈಗೆ ಕೆಲಸ ನೀಡುವ ಬಹು ನೀರೀಕ್ಷೆಯ ಮಹಾತ್ಮ ಗಾಂಧಿ ನರೇಗಾ ಯೋಜನೆ ಇಂದು ಅಧಿಕಾರಿಗಳ ಮತ್ತು ಗುತ್ತಿಗೆದಾರರಿಗೆ ಚಿನ್ನದ ಮೊಟ್ಟೆ ಇಡುವ ಕಾಮಗಾರಿಗಳಾಗಿ ಮಾರ್ಪಟ್ಟಿದೆ. ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ನೆಪದಲ್ಲಿ ಜಾಬ್‌ಕಾರ್ಡ್ಗಳನ್ನು ಪಡೆದು ಕಾಮಗಾರಿಗಳನ್ನು ಜೆಸಿಬಿಗಳಲ್ಲಿ ಮಾಡುವ ಮುಖಾಂತರ ಲಕ್ಷ ಲಕ್ಷ ಲೂಟಿ ಮಾಡುವ ಜೊತೆಗೆ ಕಾಮಗಾರಿಗಳಿಲ್ಲದೆ ನಕಲಿ ದಾಖಲೆ ಸೃಷ್ಠಿ ಮಾಡಿ ಹಣ ದೋಚುವ ನರೇಗಾವಾಗಿ ಮಾರ್ಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

27/01/2025 04:31 pm

Cinque Terre

200

Cinque Terre

0

ಸಂಬಂಧಿತ ಸುದ್ದಿ