", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/283053_1737977373_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ಜಿಲ್ಲೆಯಲ್ಲಿ ದಲಿತ ನಿಷ್ಠಾವಂತ ಅಧಿಕಾರಿಗಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ಸಚಿವ ಸತೀಶ್ ಜಾರ...Read more" } ", "keywords": "Node,Kolar,Others Commissioner's office to demonstrate against an alleged conspiracy involving AC Maitri ¹. The protest aimed to raise awareness and seek protection against this perceived threat. Similar protests have been held in Kolar, with various groups expressing their grievances and demands ² ³.,Others", "url": "https://publicnext.com/node" }
ಕೋಲಾರ : ಜಿಲ್ಲೆಯಲ್ಲಿ ದಲಿತ ನಿಷ್ಠಾವಂತ ಅಧಿಕಾರಿಗಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ದ ಅವಹೇಳನಕಾರನನ್ನು ಬಂಧಿಸುವಂತೆ ಒತ್ತಾಯಿಸಿ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮಂಗಳಾ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಲ್ಮೀಕಿ ಸಮುದಾಯದ ಮುಖಂಡ ಕೋಟೆ ಶ್ರೀನಿವಾಸ್ ದೇಶದಲ್ಲಿಯೇ ದಲಿತರು ಹೆಚ್ಚು ಇರುವ ಜಿಲ್ಲೆಗಳಲ್ಲಿ ಕೋಲಾರ ಎರಡನೇ ಸ್ಥಾನದಲ್ಲಿ ಇದೆ ಇಂತಹ ಜಿಲ್ಲೆಯಲ್ಲಿ ದಲಿತ ಅಧಿಕಾರಿಗಳಿಗೆ ರಕ್ಷಣೆ ಇಲ್ಲವಾಗಿದೆ ದಲಿತ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ನಿರಂತರವಾಗಿ ಅಡ್ಡಿಯುಂಟು ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಇತ್ತೀಚೆಗೆ ಉಪವಿಭಾಗಾಧಿಕಾರಿ ಡಾ.ಮೈತ್ರಿ ವಿರುದ್ಧ ನಡೆದಿರುವ ಘಟನೆಗಳೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಸಂವಿಧಾನದ ಅಡಿಯಲ್ಲಿ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳಲ್ಲಿರುವ ಅದೆಷ್ಟೋ ದಕ್ಷ ಮತ್ತು ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳ ಮೇಲೆ ದೌರ್ಜನ್ಯ, ಕಿರುಕುಳ, ಹತ್ಯೆಗಳು ನಡೆದಿದ್ದು ಅವರು ಪ್ರಾಮಾಣಿಕವಾಗಿ ಕೆಲಸ ಮಾಡಲು ಅದೆಷ್ಟೋ ಕಾಣದಂತ ಕೈಗಳು ಅವರ ವಿರುದ್ಧ ಕೆಲಸ ಮಾಡುತ್ತಿವೆ ಎಂದರು.
Kshetra Samachara
27/01/2025 04:59 pm