ಹೊಸದುರ್ಗ: ತಾಲೂಕಿನ ಬಾಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಗೆ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ ಭಗೀರಥ ಪೀಠಕೆ ಕಳುಹಿಸಿದ್ದ ಬ್ಯಾಗ್ ಗಳನ್ನು ಶಾಸಕರು ಹಾಗೂ ಆಹಾರ ನಾಗರಿಕ ಸರಬರಾಜು ನಿಗಮ ಮಂಡಳಿಯ ಅಧ್ಯಕ್ಷರಾದ ಬಿ.ಜಿ. ಗೋವಿಂದಪ್ಪನವರು ವಿತರಿಸಿದರು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಪೆನ್ನು, ನೋಟ್ ಬುಕ್, ಬ್ಯಾಗ್ ಗಳನ್ನು ವಿತರಣೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತೇಜನವನ್ನು ನೀಡಿದ್ದಾರೆ.
ಈ ವೇಳೆ ಉಪ್ಪಾರ ಸಮಾಜದ ಅಧ್ಯಕ್ಷ ಪರಪ್ಪ ಹಾಗೂ ಶಾಲಾ ಮುಖ್ಯ ಶಿಕ್ಷಕರು, ಎಸ್.ಡಿ.ಎಮ್ ಸಿ. ಅಧ್ಯಕ್ಷರು ಸದಸ್ಯರು ಗ್ರಾಮಸ್ಥರು ಭಾಗಿಯಾಗಿದ್ದಾರೆ.
Kshetra Samachara
27/01/2025 06:45 pm