", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1737998202-WhatsApp-Image-2025-01-27-at-10.46.06-PM-(1).jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ನಗರಸಭೆ ಅಧ್ಯಕ್ಷ ಚುನಾವಣೆ ವಿಳಂಬ ಹಿನ್ನಲೆಯಲ್ಲಿ ಬಿಜೆಪಿ ನಗರಸಭೆ ಸದಸ್ಯರಿಂದ ನಗರದ ಉಪವಿಭಾಗಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯ...Read more" } ", "keywords": "Gadag, Municipal Council Election, President Election Delay, BJP Protest, Karnataka Politics, Local Body Elections, Gadag News, Karnataka News, Election Commission, Protest Against Delay,Politics", "url": "https://publicnext.com/node" }
ಗದಗ: ನಗರಸಭೆ ಅಧ್ಯಕ್ಷ ಚುನಾವಣೆ ವಿಳಂಬ ಹಿನ್ನಲೆಯಲ್ಲಿ ಬಿಜೆಪಿ ನಗರಸಭೆ ಸದಸ್ಯರಿಂದ ನಗರದ ಉಪವಿಭಾಗಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಎರಡನೇ ಅವಧಿಗೆ ನಡೆಯಬೇಕಿದ್ದ ಅಧ್ಯಕ್ಷರ ಚುನಾವಣೆ ವಿಳಂಬ ಮಾಡಲಾಗುತ್ತಿದೆ ಅಂತ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿ ಗಂಗಪ್ಪ ಎಂ ವಿರುದ್ದ ಆಕ್ರೋಶ ಹೊರಹಾಕಿದರು.
ಕಳೆದ ಆರು ತಿಂಗಳಿನಿಂದ ನಗರಸಭೆ ಅಧ್ಯಕ್ಷರ ಚುನಾವಣೆ ನಡೆದಿಲ್ಲ ಅಂತ ಎಸಿ ಕಛೇರಿ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ನಂತರ ಎಸಿ ಕಚೇರಿ ಮುಂದೆ ತೆರಳಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಕಾನೂನು ಸಚಿವ ಡಾ. ಎಚ್.ಕೆ ಪಾಟೀಲರ ತವರೂರಲ್ಲಿ ಕಾನೂನು ಉಲ್ಲಂಘನೆ ಆಗುತ್ತಿದೆ ಅಂತ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಹಿನ್ನಲೆಯಲ್ಲಿ ದ್ವೇಷ ರಾಜಕಾರಣವನ್ನು ಸಚಿವರು ಮಾಡುತ್ತಿದ್ದು, ಅವಳಿ ನಗರದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ಸಚಿವರು ಕ್ಷುಲ್ಲಕ ರಾಜಕಾರಣವನ್ನು ಮಾಡುತ್ತಿದ್ದಾರೆ. ಇದರಿಂದಾಗಿ ನಗರದಲ್ಲಿ ಸಾಕಷ್ಟು ಮೂಲಭೂತ ಸೌಲಭ್ಯದ ತೊಂದರೆ ಜನತೆಗೆ ಆಗುತ್ತಿದೆ. ಕೂಡಲೇ ಚುನಾವಣೆಯ ದಿನಾಂಕ ಘೋಷಿಸಬೇಕು ಅಂತ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ, ಮೊದಲ ಅವಧಿಯ ಅಧ್ಯಕ್ಷ ಸ್ಥಾನದ ಮುಗಿದು ಆರು ತಿಂಗಳು ಗತಿಸಿವೆ. ಆದರೆ, ಉಪವಿಭಾಗಾಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ನಗರಸಭೆ ಸದಸ್ಯರು ನಾಮಕಾವಸ್ತೆಗೆ ಸದಸ್ಯರಾಗಿದ್ದಾರೆ. ಈ ಭಾಗದ ಶಾಸಕರು ಕೇವಲ ಗ್ರಾಮಿಣ ಭಾಗದ ಶಾಸಕರಂತೆ ವರ್ತಿಸುತ್ತಿದ್ದಾರೆ ಅಂತ ಗಂಭೀರವಾಗಿ ಆರೋಪಿಸಿದರು.
PublicNext
27/01/2025 10:46 pm