", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/418299-1738030440-kambla.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Umesh Mangalore" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮಾರ್ಚ್ 1 ಮತ್ತು 2ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ...Read more" } ", "keywords": ",Udupi,Mangalore,Cultural-Activity", "url": "https://publicnext.com/node" }
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮಾರ್ಚ್ 1 ಮತ್ತು 2ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು.
ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೋಟಿ ಚೆನ್ನಯ ಕಂಬಳ ಸಮಿತಿಯ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಸೇವೆ ಸಲ್ಲಿಸಲಾಯಿತು. ಬಳಿಕ ದೇವರಮಾರು ಗದ್ದೆಯಲ್ಲಿರುವ ಕ್ಷೇತ್ರದ ಮೂಲ ನಾಗ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಇದಾದ ಬಳಿಕ ಕಂಬಳದ ಕರೆಯ ಮಂಜೊಟ್ಟಿಯಲ್ಲಿ ನಿಂತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಮುಹೂರ್ತ ನೆರವೇರಿಸಿದರು. ಕಂಬಳ ಕರೆಗೆ ಹಾಲು ಮತ್ತು ಎಳನೀರು ಸುರಿದು ಸುಮುಹೂರ್ತ ನೆರವೇರಿಸಲಾಯಿತು. ಇನ್ನೊಂದು ತಿಂಗಳಲ್ಲಿ ನಡೆಯುವ ಕಂಬಳಕ್ಕೆ ಪೂರ್ವಭಾವಿಯಾಗಿ ನಡೆಯುವ ಎಲ್ಲ ಕಾರ್ಯಗಳು ಮುಹೂರ್ತದ ಬೆನ್ನಲ್ಲೇ ನಡೆಯಲಿದೆ ಎಂದು ಪ್ರಕಟಿಸಲಾಯಿತು.
PublicNext
28/01/2025 07:44 am