", "articleSection": "Politics,Cultural Activity", "image": { "@type": "ImageObject", "url": "https://prod.cdn.publicnext.com/s3fs-public/418299-1738040456-sanmana.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ಸ್ವಾರ್ಥಕ್ಕಾಗಿ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಸಂವಿಧಾನದಲ್ಲಿ ಹಲವಾರು ತಿದ್ದುಪಡಿಗಳನ್ನು ಮಾಡಿದೆಯೇ ಹೊರತು ಪರಿಶಿಷ್ಟ ಜಾತ...Read more" } ", "keywords": ",Gadag,Politics,Cultural-Activity", "url": "https://publicnext.com/node" }
ಗದಗ : ಸ್ವಾರ್ಥಕ್ಕಾಗಿ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಸಂವಿಧಾನದಲ್ಲಿ ಹಲವಾರು ತಿದ್ದುಪಡಿಗಳನ್ನು ಮಾಡಿದೆಯೇ ಹೊರತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಏನು ಮಾಡಲಿಲ್ಲ ಎಂದು ರಾಜ್ಯ ಎಸ್.ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಿಧಾನ ಸನ್ಮಾನ ಅಭಿಯಾನದ ರಾಜ್ಯ ಸಂಯೋಜಕರಾದ ಮಹೇಂದ್ರ ಕೌತಾಳ ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ ಅವರ ನಿವಾಸದಲ್ಲಿ ಏರ್ಪಡಿಸಿದ ಸಂವಿಧಾನ ಸನ್ಮಾನ ಹಾಗೂ ಭೀಮ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಪ್ರಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಸಮಾನತೆ ಹಾಗೂ ಸಾಮಾಜಿಕ ನ್ಯಾಯ ಸಾರುವ ಸಂವಿಧಾನ ರಚನೆ ಮಾಡಿದ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ಗೌರವ ಸಲ್ಲಿಸುವ ಹಿನ್ನೆಲೆಯಲ್ಲಿ ಭೀಮ ಸಂಗಮ ಹಾಗೂ ಸಹ ಭೋಜನ ಔತಣಕೂಟ ಏರ್ಪಡಿಸಲಾಗಿದೆ.
ಕಾಂಗ್ರೆಸ್ನವರು ಬಿಜೆಪಿ ಸರ್ಕಾರ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ ಎಂದು ಸುಳ್ಳು ವದಂತಿ ಹೇಳುತ್ತಿರುವುದು ಸತ್ಯಕ್ಕೆ ದೂರವಾದದ್ದು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯರಾದ ಕೆ.ಎಚ್. ಬೆಲೂರ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ರವರು ನಡೆದು ಬಂದ ದಾರಿ ಹಾಗೂ ದೇಶಕ್ಕೆ ಕೊಟ್ಟ ಕೊಡುಗೆಯ ಕಠಿಣ ವಿದ್ವತಪೂರ್ಣ ಭಾಷಣ ಮಾಡಿದರು.
ಈ ಕಾರ್ಯಕ್ರಮದಲ್ಲಿ ಮೋಹನ ಅಲ್ಮೇಲ್ಕರ, ಉಷಾ ದಾಸರ ಮತ್ತು ರಾಜು ಕುರಡಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ 26 ಪುರುಷರಿಗೆ ಹಾಗೂ 30 ಮಹಿಳಾ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಎಮ್.ಎಸ್. ಕರಿಗೌಡರ, ಮೋಹನ ಮಾಳಶೆಟ್ಟಿ, ವಿಜಯಕುಮಾರ ಗಡ್ಡಿ, ನಾಗರಾಜ ತಳವಾರ, ಭೀಮಸಿಂಗ್ ರಾಥೋಡ, ನಾಗರತ್ನ ಮುಳಗುಂದ, ಅನೇಕರು ಉಪಸ್ಥಿತರಿದ್ದರು.
PublicNext
28/01/2025 10:31 am