", "articleSection": "Health & Fitness,Crime,Government", "image": { "@type": "ImageObject", "url": "https://prod.cdn.publicnext.com/s3fs-public/418299-1738045528-sav.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆ...Read more" } ", "keywords": ",Belgaum,Health-and-Fitness,Crime,Government", "url": "https://publicnext.com/node" } ಬೆಳಗಾವಿ: ಬಿಮ್ಸ್‌ನಲ್ಲಿ ನಿಲ್ಲದ ಬಾಣಂತಿಯರ ಸಾವು - ವೈದ್ಯರ ನಿರ್ಲಕ್ಷ್ಯ ಕಾರಣವಾಯ್ತಾ..?
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಬಿಮ್ಸ್‌ನಲ್ಲಿ ನಿಲ್ಲದ ಬಾಣಂತಿಯರ ಸಾವು - ವೈದ್ಯರ ನಿರ್ಲಕ್ಷ್ಯ ಕಾರಣವಾಯ್ತಾ..?

ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಕರ್ಮಕಾಂಡ ಮತ್ತಷ್ಟು ಬಯಲಾಗಿದೆ. ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಮೃತಪಟ್ಟ ಘಟನೆ ಮಂಗಳವಾರ ಬಿಮ್ಸ್ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಇದೀಗ ಬಾಣಂತಿ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಬಾಣಂತಿ ಅಂಜಲಿ ಪಾಟೀಲ್ (31) ಮೃತ ಬಾಣಂತಿ ಸಾವನ್ನಪ್ಪಿದ್ದಾಳೆ. ನಿನ್ನೆ ಸಂಜೆ ಹೆರಿಗೆ ನೋವು ಕಾಣಿಕೊಂಡ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಳು. ಹೆಣ್ಣು ಮಗುವಿಗೆ ಜನ್ಮ ನೀಡಿ ಮೃತಪಟ್ಟಿದ್ದಾಳೆ. ಹೆಣ್ಣು ಮಗು ಆರೋಗ್ಯವಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನೂ ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಬಾಣಂತಿ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದದ್ದಾರೆ. ಸರಿಯಾದ ಸಮಯಕ್ಕೆ ವೈದ್ಯರು ಚಿಕಿತ್ಸೆ ನೀಡಿಲ್ಲ‌. ನಿನ್ನೆ ಸಂಜೆ ನಾಲ್ಕು ಗಂಟೆಗೆ ಅಂಜಲಿ ಪಾಟೀಲ್ ಒಪಿಡಿಗೆ ಬಂದಿದ್ದರು. ಜನವರಿ 22ಕ್ಕೆ ಅಂಜಲಿ ಪಾಟೀಲ್ ಹೆರಿಗೆ ದಿನಾಂಕ ನೀಡಲಾಗಿತ್ತು. ಒಪಿಡಿಯಲ್ಲಿ ಪರಿಶೀಲನೆ ನಡೆಸಿದಾಗ ಮಗುವಿನ ಹಾರ್ಟ್‌ಬೀಟ್ ಕಡಿಮೆ ಆಗಿತ್ತು. ಈ ಕಾರಣಕ್ಕೆ ಸಿಜರಿನ್ ಮೂಲಕ ರಾತ್ರಿ 11.5 ಕ್ಕೆ ಹೆರಿಗೆ ಮಾಡಲಾಗಿದೆ. ಬೆಳಗ್ಗೆ 5ಕ್ಕೆ ಅಂಜಲಿ ಪಾಟೀಲ ಸಾವನ್ನಪ್ಪಿದ್ದಾಳೆ. ರಕ್ತ ಹೆಪ್ಪುಗಟ್ಟಿ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಅಂಜಲಿ ಸಾವಿಗೆ ಆಮ್ನಿಯೊಟೆಕ್ ಪ್ಲೂಯಿಡ್ ಎಂಬಾಲೀಸ್ ಕಾರಣ ಎಂಬುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಬೀಮ್ಸ್ ಹೆರಿಗೆ ವಿಭಾಗದ ಮುಖ್ಯಸ್ಥ ಡಾ. ವಸಂತ ಕಬ್ಬೂರ ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಮುಂದುವರೆದಿದ್ದು, ಈ ಪ್ರರಕಣಗಳಿಗೆ ವೈದ್ಯರ ನಿರ್ಲಕ್ಷ್ಯ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಇರುವುದು ಹಾಗೂ ನೂರಿತ ವೈದ್ಯರ ಕೊರೆತೆಯಿಂದ ಈ ಎಲ್ಲಾ ಘಟನೆಗಳು ನಡೆಯುತ್ತಿದೆ. ಹಾಗಾಗಿ ಸರ್ಕಾರ ಈ ರೀತಿ ಘಟನೆಗಳು ಮತ್ತೆ ಮತ್ತೆ ಆಗದಂತೆ ನೋಡಿಕೊಳ್ಳಬೇಕಿದೆ.

ಪ್ರಲ್ಹಾದ ಪೂಜಾರಿ, ಬೆಳಗಾವಿ

Edited By : Ashok M
PublicNext

PublicNext

28/01/2025 11:55 am

Cinque Terre

40.67 K

Cinque Terre

0

ಸಂಬಂಧಿತ ಸುದ್ದಿ