ಹುಕ್ಕೇರಿ: ಸಾರ್ವಜನಿಕರ ದೂರಿನ ಮೇರೆಗೆ ಹುಕ್ಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ)ಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಇಲ್ಲಿಂದ ವರ್ಗಾವಣೆ ಮಾಡುವಂತೆ ಕ್ಷೇತ್ರದ ಶಾಸಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಗೆ ಪತ್ರ ಬರೆದಿದ್ದಾರೆ.
ಹುಕ್ಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೊಳೆಪ್ಪ ಎಚ್ ಅವರ ಮೇಲೆ ವಿವಿಧ ಗುರುತರ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಅವರನ್ನು ಹುಕ್ಕೇರಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವಂತೆ ಶಾಸಕ ನಿಖಿಲ್ ಕತ್ತಿ ಅವರು ಕಳೆದ ಡಿ. 16 ರಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಇಲಾಖೆ ಉಪನಿರ್ದೇಶಕರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ತಾಲೂಕಿನ ವಿವಿಧ ಕಡೆಗಳಲ್ಲಿ ಹೊಸದಾಗಿ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರ ಹಂಚಿಕೆ ಮಾಡಲು ಹಣಕ್ಕೆ ಬೇಡಿಕೆಯಿಟ್ಟು ಸತಾಯಿಸುವುದು. ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು. ಕೆಲ ಯೋಜನೆಗಳಲ್ಲಿ ಅವ್ಯವಹಾರ ಮಾಡಿರುವುದು ತಮ್ಮ ಗಮನಕ್ಕೆ ಬಂದಿರುವುದರಿಂದ ತಕ್ಷಣವೇ ಸಿಡಿಪಿಒ ಹೊಳೆಪ್ಪ ಮೇಲೆ ಶಿಸ್ತು ಕ್ರಮ ಕೈಗೊಂಡು ಹುಕ್ಕೇರಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವಂತೆ ಶಾಸಕರು ಒತ್ತಾಯಿಸಿದ್ದಾರೆ.
Kshetra Samachara
28/01/2025 02:41 pm