ಶಿವಮೊಗ್ಗ : ಜನವರಿ 30 ರಂದು ಸರ್ವೋದಯ ದಿನ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತ ಕವಿತಾ ಪ್ರಕಟಣೆ ತಿಳಿಸಿದ್ದಾರೆ.
Kshetra Samachara
28/01/2025 02:41 pm