", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/283053_1738058838_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ರಸ್ತೆ ಬದಿಯಲ್ಲಿನ ಅಂಗಡಿಗಳಿಂದ ತಿರುವಿನಲ್ಲಿ ಸ್ಪಷ್ಟವಾಗಿ ರಸ್ತೆ ಕಾಣದೇ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ಅಪಘ...Read more" } ", "keywords": "Request to clear encroachments from roadside shop fronts, ensuring free flow of traffic and pedestrian movement while maintaining safety and accessibility.,Kolar,Government", "url": "https://publicnext.com/node" }
ಕೋಲಾರ : ರಸ್ತೆ ಬದಿಯಲ್ಲಿನ ಅಂಗಡಿಗಳಿಂದ ತಿರುವಿನಲ್ಲಿ ಸ್ಪಷ್ಟವಾಗಿ ರಸ್ತೆ ಕಾಣದೇ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಬದಿಯ ಅಂಗಡಿ ಮುಂಗಟ್ಟುಗಳನ್ನು ತೆರವು ಗೊಳಿಸಲು ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ವಾಲ್ಮೀಕಿ ಸಂಘಟನೆಯಿಂದ ಕೋಲಾರ ಅಪರ ಜಿಲ್ಲಾಧಿಕಾರಿ ಮಂಗಳ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ವಾಲ್ಮೀಕಿ ನವ ಸಮಾಜ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷ ವೆಂಕಟ್ ಮಾತನಾಡಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ಅಂತರ ರಾಜ್ಯ ಆಂಧ್ರ ಪ್ರದೇಶ ಸಂಪರ್ಕ ಕಲ್ಪಿಸುವ ಹಾಗೂ ಬೆಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಜಂಕ್ಷನ್ ಆಗಿದ್ದು ಈ ಜಂಕ್ಷನ್ ನಲ್ಲಿ ಭಾರಿ ತಿರುವು ಇರುವ ಕಾರಣದಿಂದ ರಸ್ತೆ ಬದಿಗೆ ಹೊಂದಿಕೊಂಡಿರುವ ಅಂಗಡಿಯ ಮುಂಗಟ್ಟುಗಳಿಂದ ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು .
PublicNext
28/01/2025 03:37 pm