ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING : ವೈದ್ಯರ ನಿರ್ಲಕ್ಷ್ಯ ಆರೋಪ - ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಸಾವು

ಶಿವಮೊಗ್ಗ : ವೈದ್ಯರ ನಿರ್ಲಕ್ಷ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ಉಪ ವಿಭಾಗ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟೆ ನಿವಾಸಿ ಅಶ್ವಿನಿ(29) ಮೃತ ಮಹಿಳೆ.

ಜನವರಿ 26 ರಂದು ಸಾಗರ ಉಪ ವಿಭಾಗ ಆಸ್ಪತ್ರೆಗೆ ಮಹಿಳೆ ದಾಖಲಾಗಿದ್ರು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನಪ್ಪಿದ್ದಾರೆ. ಮೃತ ಮಹಿಳೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂಸಿಎ ಸ್ನಾತಕೊತ್ತರ ಪದವಿಯಲ್ಲಿ ಗೋಲ್ಡ್ ಮೆಡಲ್ ಪಡೆದಿದ್ರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Edited By : Abhishek Kamoji
PublicNext

PublicNext

28/01/2025 03:40 pm

Cinque Terre

16.17 K

Cinque Terre

0

ಸಂಬಂಧಿತ ಸುದ್ದಿ