ಬೈಲಹೊಂಗಲ : ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನ ಭಾಗ್ಯ, ಮತ್ತು ಯುವ ನಿಧಿ ಯೋಜನೆಗಳು ಪ್ರತಿ ಅರ್ಹ ಕುಟುಂಬಗಳಿಗೆ ತಲುಪಿಸುವಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿಯ ಸದಸ್ಯರು ಕೈಜೋಡಿಸಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಅವರು ಮಂಗಳವಾರ ಪಟ್ಟಣದ ತಾಪಂ ಆವರಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಕೊಠಡಿ ಉದ್ಘಾಟನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅತಿ ಕಡು ಬಡವರಿಗೆ ತಲುಪಿಸುವಲ್ಲಿ ಎಲ್ಲರೂ ಕೈಜೋಡಿಸಿ ಶ್ರಮಿಸಬೇಕು ಇದರಿಂದ ಪ್ರತಿ ಕುಟುಂಬವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುನ್ನೆಲೆಗೆ ಬರುತ್ತದೆ ಎಂದರು.
ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ ಹಾಗೂ ಯುವ ನಿಧಿಯಿಂದ ನಿರುದ್ಯೋಗಿ ಯುವಕರಿಗೆ ಸಹಕಾರಿಯಾಗಿದೆ ಎಂದು ಹೇಳಿದರು.
PublicNext
28/01/2025 04:11 pm