", "articleSection": "Human Stories,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738066797-V12~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ದೇಶವು 75ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದ...Read more" } ", "keywords": ",Chikmagalur,Human-Stories,News,Public-News", "url": "https://publicnext.com/node" }
ಚಿಕ್ಕಮಗಳೂರು: ದೇಶವು 75ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 21 ಪೊಲೀಸರು ಆಯ್ಕೆಯಾಗಿದ್ದಾರೆ. ಇದರಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಹೆಡ್ ಕಾನ್ಸ್ಟೇಬಲ್ ನಯಾಜ್ ಅಂಜುಮ್ ಕೂಡ ಓಬ್ಬರು.
ಜಿಲ್ಲಾ ಪೊಲೀಸ್ ತಾಂತ್ರಿಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಜುಮ್ ಮೊಬೈಲ್ ಟವರ್ ಡೇಟಾ, ಬ್ಯಾಂಕಿಂಗ್, ಯುಪಿಐ ವಹಿವಾಟುಗಳು, ಇತರ ತಾಂತ್ರಿಕ ವಿಚಾರಗಳಲ್ಲಿ ಕ್ರಿಮಿನಲ್ ಪ್ರಕರಣಗಳ ಪತ್ತೆ ಹಚ್ಚುವಿಕೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಇವರಿಗೆ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಒಲಿದು ಬಂದಿದೆ. ಈ ಕುರಿತು ಪಬ್ಲಿಕ್ ನೆಕ್ಸ್ಟ್ ಜೊತೆ ಚಿಕ್ಕಮಗಳೂರು ಎಸ್ಪಿ ಡಾ. ವಿಕ್ರಮ್ ಅಮಟೆ ಸಂತಸ ಹಂಚಿಕೊಂಡಿದ್ದು ಹೀಗೆ.
ಇದು ಅಂಜುಮ್ ಸಾಧನೆಯಾದ್ರೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಗರದ ಡಾ. ಶಿವಾಜಿ ನಾಯ್ಕ್ ಅವರ ಪತ್ನಿ ಸಾಕಮ್ಮ ಅವರ ಮೆದುಳು ನವೆಂಬರ್ 30-2024ರಂದು ನಿಷ್ಕ್ರಿಯಗೊಂಡಿತ್ತು ಚಿಕಿತ್ಸೆಗೆ ಸ್ಪಂದಿಸದ ಸಾಕಮ್ಮ ಬದುಕುವುದು ಅಸಾಧ್ಯವೆಂದು ತಿಳಿದಾಗ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಬಹು ಅಂಗಾಂಗ ದಾನಕ್ಕೆ ಕುಟುಂಬಸ್ಥರು ಸಮ್ಮತಿಸಿದ್ರು. ಹೀಗಾಗಿ ಡಿಸೆಂಬರ್ 2 ರಂದು ಪಡೆಯಲಾಗಿದ್ದ ಅಂಗಾಂಗಳಿಂದ ಇನ್ನೊಬ್ಬರ ಬಾಳಿನಲ್ಲಿ ಸಾಕಮ್ಮ ಬೆಳಕಾಗಿದ್ದಾರೆ. ಹೀಗಾಗಿ ಪಬ್ಲಿಕ್ ನೆಕ್ಸ್ಟ್ ಮೂಲಕ ಜಿಲ್ಲಾ ಸರ್ಜನ್ ಡಾ. ಮೋಹನ್ ಕುಮಾರ್ ಡಾ. ಶಿವಾಜಿ ನಾಯ್ಕ್ ಕುಟುಂಬಕ್ಕೆ ಧನ್ಯವಾದ ತಿಳಿಸಿದ್ರು.
ಒಟ್ಟಾರೆ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಈ ಬಾರಿ ಇಬ್ಬರು ವಿಶೇಷ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಿದ್ದು ಇವರ ಕಾರ್ಯಗಳು ಮತ್ತಷ್ಟು ಜನರಿಗೆ ಪ್ರೇರಣೆಗೊಳ್ಳಲಿ ಎಂಬುದೇ ನಮ್ಮ ಆಶಯ.
ಡ್ಯಾನಿ, ಪಬ್ಲಿಕ್ ನೆಕ್ಸ್ಟ್, ಚಿಕ್ಕಮಗಳೂರು
Kshetra Samachara
28/01/2025 05:52 pm