ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್‌ನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ದಂಧೆ! ಅಂತರ್ಜಲ ಕುಸಿಯುವ ಆತಂಕ

ಬೀದರ್: ಗಡಿಜಿಲ್ಲೆ ಬೀದರ್‌ನಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಅದರಲ್ಲೂ ನದಿ ಪಾತ್ರದಲ್ಲಿ ಈ ದಂಧೆ ಜೋರಾಗಿ ನಡೆಯುತ್ತಿರುವುದರಿಂದ ಜನರಲ್ಲಿ ಅಂತರ್ಜಲ ಕುಸಿಯುವ ಆತಂಕ ಎದುರಾಗಿದೆ.

ಹೌದು, ಅಕ್ರಮ ಮರಳು ದಂಧೆಕೋರರು ಮಾಂಜ್ರಾ ನದಿಯ ಒಡಲನ್ನು ಬಗೆಯುತ್ತಿದ್ದಾರೆ. ಭಾಲ್ಕಿ ತಾಲ್ಲೂಕಿನ ವಾಂಜರಖೇಡಾ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ಜೋರಾಗಿದೆ. ಇದರಿಂದ ಅಂತರ್ಜಲ ಕುಸಿಯುವ ಆತಂಕ ಎದುರಾಗಿದೆ, ಹಾಗಾಗಿ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ.

ವಾಂಜರಖೇಡಾ ಗ್ರಾಮದ ಬಳಿಯ ಮಾಂಜ್ರಾ ನದಿಯಲ್ಲಿ 5 ಬೋಟ್‌ಗಳು ಬೀಡುಬಿಟ್ಟಿದ್ದು, ಹಗಲು-ರಾತ್ರಿ ಎನ್ನದೇ ಬೋಟ್‌ಗಳ ಮೂಲಕ ಮರಳು ತೆಗೆಯುತ್ತಿದ್ದಾರೆ. ಬೇಸಿಗೆಯಲ್ಲಿ ಬೆಳೆಗಳಿಗೆ ನೀರುಣಿಸಲು, ಜಾನುವಾರುಗಳಿಗೆ ನೀರು ಕುಡಿಸಲು ಸಮಸ್ಯೆ ಎದುರಾಗಬಹುದು ಎನ್ನುವ ಆತಂಕದಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ:ಯೋಹಾನ್ ಪಿ ಹೊನ್ನಡ್ಡಿ ಬೀದರ್

Edited By : Ashok M
PublicNext

PublicNext

29/01/2025 08:05 am

Cinque Terre

28.37 K

Cinque Terre

0