", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/418299-1738121508-krama.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳ...Read more" } ", "keywords": "Caste Based Violence, Caste Discrimination, Atrocities Against Dalits, SC/ST Act, Prevention of Atrocities, Caste Violence, Dalit Rights, Human Rights, Social Justice, Indian Law, Caste System, Social Hierarchy, Equality, Justice, Accountability, Government Initiatives, Policy Changes, Social Reform, Dalit Empowerment, Caste-Based Crimes, Punishment, Deterrence, Rule of Law ,Bangalore,Bangalore-Rural,Politics,Government", "url": "https://publicnext.com/node" } ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸಿಎಂ ಸೂಚನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸಿಎಂ ಸೂಚನೆ

ಬೆಂಗಳೂರು : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ.

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು , ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು.

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದರು.

Edited By : Ashok M
PublicNext

PublicNext

29/01/2025 09:01 am

Cinque Terre

22.99 K

Cinque Terre

0