", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1738128035_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಡಿಕೇರಿ: ಕಟ್ಟೆಮಾಡು ಗ್ರಾಮದ ಶ್ರೀಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವ...Read more" } ", "keywords": "Node,Kodagu,News", "url": "https://publicnext.com/node" } ಮಡಿಕೇರಿ: ಹಲ್ಲೆ ಮಾಡಿದವರ ಬಂಧನಕ್ಕೆ ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿ ಆಗ್ರಹ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಹಲ್ಲೆ ಮಾಡಿದವರ ಬಂಧನಕ್ಕೆ ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿ ಆಗ್ರಹ

ಮಡಿಕೇರಿ: ಕಟ್ಟೆಮಾಡು ಗ್ರಾಮದ ಶ್ರೀಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿ ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಕೆ.ಶಶಿ ಜನಾರ್ಧನ ಅವರು ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ ಶಮನಕ್ಕೆ ಜಿಲ್ಲಾಡಳಿತ ಫೆ.10 ರವರೆಗೆ ಕಾಲಾವಕಾಶ ನೀಡಿದೆ. ಅಮಿತಿ ಶಾಂತಿಯುತ ಪರಿಹಾರ ದೊರೆಯುವ ವಿಶ್ವಾಸದಲ್ಲಿರುವಾಗಲೇ ಅರ್ಚಕರ ಮೇಲೆ ಹಲ್ಲೆ ನಡೆದಿದೆ. ಮೂಗು ಮುರಿದಿದ್ದು, ಐಸಿಯುನಲ್ಲಿ ದಾಖಲಾಗಿದ್ದಾರೆ. ಶಸ್ತ್ರ ಚಿಕಿತ್ಸೆಯಾಗಬೇಕೆಂದು ವೈದ್ಯರು ತಿಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ದೇವಾಲಯ ನಿರ್ಮಾಣದ ಮೂಲ ಉದ್ದೇಶ ಶಾಂತಿ ಮತ್ತು ಪ್ರಾರ್ಥನೆಯೇ ಆಗಿದೆ. ಆದರೆ ಶ್ರೀಮಹಾ ಮೃತ್ಯುಂಜಯ ದೇವಾಲಯದ ವಿಚಾರದಲ್ಲಿ ದ್ವೇಷಪೂರಿತವಾಗಿ ನಡೆಯುತ್ತಿರುವ ಅಹಿತಕರ ಘಟನೆ ಸಮಾಜ ಮತ್ತು ದೇವಾಲಯಕ್ಕೆ ಒಳ್ಳೆಯದಲ್ಲ. ಅರ್ಚಕರ ಮನೆಗೆ ಹೋಗಿ ಹಲ್ಲೆ ಮಾಡಿರುವುದು ದೊಡ್ಡ ಅಪರಾಧವಾಗಿದ್ದು, ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.

ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹಲ್ಲೆ ಪ್ರಕರಣಗಳು ನಡೆಯಬಹುದು ಎಂದು ಶಶಿ ಜನಾರ್ಧನ ಅಭಿಪ್ರಾಯಪಟ್ಟರು.

Edited By : PublicNext Desk
Kshetra Samachara

Kshetra Samachara

29/01/2025 10:50 am

Cinque Terre

2.06 K

Cinque Terre

0

ಸಂಬಂಧಿತ ಸುದ್ದಿ