", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/29545520250129121702filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarNavalagunda" }, "editor": { "@type": "Person", "name": "9740080658" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವಲಗುಂದ: ಕೊರೊನಾ ಸಂದರ್ಭದಲ್ಲಿ ಆದ ಸಾವು ನೋವುಗಳಿಗಿಂತ ರಸ್ತೆ ಅಪಘಾತಗಳಿಂದ ಸಂಭವಿಸುತ್ತಿರುವ ಸಾವು-ನೋವುಗಳ ಪ್ರಮಾಣ ಹೆಚ್ಚಾಗಿದೆ ಎಂದು ಪಿಎಸ್...Read more" } ", "keywords": "Node,Hubballi-Dharwad,Public-News", "url": "https://publicnext.com/node" }
ನವಲಗುಂದ: ಕೊರೊನಾ ಸಂದರ್ಭದಲ್ಲಿ ಆದ ಸಾವು ನೋವುಗಳಿಗಿಂತ ರಸ್ತೆ ಅಪಘಾತಗಳಿಂದ ಸಂಭವಿಸುತ್ತಿರುವ ಸಾವು-ನೋವುಗಳ ಪ್ರಮಾಣ ಹೆಚ್ಚಾಗಿದೆ ಎಂದು ಪಿಎಸ್ಐ ಜನಾರ್ಧನ ಭಟ್ರಳ್ಳಿ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ಸಾರಿಗೆ ಘಟಕದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಇಂಧನ ಉಳಿತಾಯ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಭಯದಿಂದ ಎರಡೆರಡು ಮಾಸ್ಕ್ ಧರಿಸುತ್ತಿದ್ದ ಜನರು, ರಸ್ತೆ ಅಪಘಾತದ ಭಯವಿಲ್ಲದೆ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡಿ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ರೋಡ್ ಹಂಪ್ ಅಳವಡಿಸಲು ಈಗ ಸಾರ್ವಜನಿಕರಿಂದ ಬೇಡಿಕೆಗಳು ಹೆಚ್ಚಾಗಿವೆ ಸಾರ್ವಜನಿಕರು ವಾಹನ ಚಾಲನೆ ಸಂದರ್ಭದಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿಭಾಗೀಯ ನಿಯಂತ್ರಣ ಅಧಿಕಾರಿ ಎಚ್.ರಾಮನಗೌಡರ, ಈ ಮೊದಲು ರಸ್ತೆ ಸರಿ ಇಲ್ಲದೆ ಅಪಘಾತಗಳು ಸಂಭವಿಸುತ್ತಿದ್ದವು. ರಸ್ತೆ ಅಭಿವೃದ್ಧಿ ಹೊಂದಿದ ಮೇಲೆ ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಹೆಚ್ಚಾಗುತ್ತಿವೆ ಎಂದರು.
ವಿಭಾಗೀಯ ಅಧಿಕಾರಿಗಳಾದ ಪಿ.ವೈ. ಗಡಾದ, ಎಸ್.ಎ. ಬೀಳಗಿ, ಅಶೋಕ ಕಾಡರಕೊಪ್ಪ, ರಾಜು ಮಾಲಗಿತ್ತಿ, ಮಂಜುನಾಥ ಕಳಸ, ಮಾಬೂಸಾಬ ದಿವಾನಖಾನಾವರ ಇದ್ದರು.
Kshetra Samachara
29/01/2025 12:17 pm