ಹಾಸನ: ನಗರ ಹೊರವಲಯದ ಗೊರೂರು ರಸ್ತೆಯ ಹನುಮಂತಪುರದಲ್ಲಿ ಇಂಡಿಯಾ ಒನ್ ಎಟಿಮ್ ಮೆಷಿನ್ ನೇ ಕಳ್ಳರು ಹೊತ್ತೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ.
ರಾಜ್ಯ ಹೆದ್ದಾರಿ ಬದಿಯಲ್ಲೇ ಇರುವ ಎಟಿಎಂ ಮಷಿನ್ ಕಾಣೆಯಾಗಿರುವುದು ಬೆಳಗ್ಗೆ ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಕಳ್ಳರು ಎಟಿಎಂ ಮೆಷಿನ್ ಹೊತ್ತೊಯ್ದಿರುವುದು ಕಂಡುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಎಟಿಎಂ ಮೆಷಿನ್ ನಲ್ಲಿ ಸುಮಾರು ಒಂದು ಲಕ್ಷ ರೂ. ಹಣ ಮಾತ್ರವೇ ಇತ್ತು ಎನ್ನಲಾಗುತ್ತಿದ್ದು ಇನ್ನೂ ಖಚಿತ ಮಾಹಿತಿ ಹೊರಬೀಳಬೇಕಿದೆ.
PublicNext
29/01/2025 12:18 pm