ಉಡುಪಿ: ಕುಸಿದುಬಿದ್ದು ಅಸಹಾಯಕ ಸ್ಥಿತಿಯಲ್ಲಿದ್ದ ಹೊರ ಜಿಲ್ಲೆಯ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.ನಗರದ ನಾರ್ತ್ ಶಾಲೆಯ ಎದುರಿನ ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಗಮನಿಸಿದ ಸಾರ್ವಜನಿಕರು, ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ದಾಖಲು ಪ್ರಕ್ರಿಯೆ ನಡೆಸುವಾಗ ರಕ್ಷಿಸಲ್ಪಟ್ಟ ವ್ಯಕ್ತಿಯು ಹೆಸರು ಶಿವ, ತಂದೆ ಫಕೀರಪ್ಪ ಹಾನಗಲ್ ಎಂದು ತಿಳಿಸಿದ್ದಾರೆ.ಇವರು ಶ್ರೀ ಕೃಷ್ಣ ಮಠದ ದರ್ಶನಾರ್ಥಿಯಾಗಿ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಸಂಬಂಧಿಕರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸಂಪರ್ಕಿಸಲು ಸೂಚಿಸಲಾಗಿದೆ.
Kshetra Samachara
29/01/2025 01:07 pm