", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/283053_1738143750_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಜೆಟ್ ನಲ್ಲಿ ಬಿಸಿಯೂಟ ನೌಕರರ ಕನಿಷ್ಠ ವೇತನವನ್ನು 10,500 ರೂಗಳಿಗೆ ಹೆಚ್ಚಳ ಮಾಡುವಂತೆ ಹಾಗೂ ಹಲವಾ...Read more" } ", "keywords": "Node,Kolar,Others", "url": "https://publicnext.com/node" }
ಕೋಲಾರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಜೆಟ್ ನಲ್ಲಿ ಬಿಸಿಯೂಟ ನೌಕರರ ಕನಿಷ್ಠ ವೇತನವನ್ನು 10,500 ರೂಗಳಿಗೆ ಹೆಚ್ಚಳ ಮಾಡುವಂತೆ ಹಾಗೂ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ. ಕೋಲಾರ ನಗರದ ನಚಿಕೇತ ನಿಲಯದಿಂದ ಜಿಲ್ಲಾ ಪಂಚಾಯತಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಮುತ್ತಿಗೆ ಹಾಕಿ ಮುಖ್ಯ ಮಂತ್ರಿಗಳಿಗೆ, ಉಪ ಮುಖ್ಯ ಮಂತ್ರಿಗಳಿಗೆ, ಸಚಿವರಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಜಾಸೇವಾ ಸಮಿತಿ ಸಂಯೋಜಿತ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ (ಬಿಸಿಯೂಟ) ನೌಕರರ ಕ್ಷೇಮಾಭಿವೃದ್ಧಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕಲ್ವಮಂಜಲಿ ಸಿ.ಶಿವಣ್ಣ ಮಾತನಾಡಿ ಕಳೆದ 23 ವರ್ಷಗಳಿಂದ ಬಿಸಿಯೂಟ ತಯಾರಿಕೆಯಲ್ಲಿ ದುಡಿಯುತ್ತಿರುವ ನೌಕರರು ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು,ಪ್ರಸ್ತುತ ಕೇವಲ 2600 ರಿಂದ 3700ರೂ ಸಂಬಳಕ್ಕೆ ದುಡಿಯುತ್ತಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ ಎಂದರು.
ಆದ್ದರಿಂದ ರಾಜ್ಯದ ಎಲ್ಲಾ ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ 10,500 ರೂಗಳನ್ನು ಮುಂಬರುವ ಬಜೆಟ್ ನಲ್ಲಿ ಹೆಚ್ಚಳ ಮಾಡಬೇಕು,ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ,ಯು.ಕೆ.ಜಿ ಪ್ರಾರಂಭಿಸಬೇಕು, ಸರ್ಕಾರಿ ನೌಕರರ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಆದೇಶ ಹೊರಡಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕ ಎಂದು ತಿಳಿಸಿದರು.
Kshetra Samachara
29/01/2025 03:12 pm