ವಿಜಯಪುರ: ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗಿದೆ. ರಸ್ತೆ ಪಕ್ಕದಲ್ಲೇ ಟೆಂಟ್ ಹಾಕಿಕೊಂಡು ಮಹಿಳೆಯರು ಪ್ರತಿಭಟನೆ ನಡೆಸಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ 1500 ಜನ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಇಲ್ಲ...ನೌಕರರ ಬಾಕಿ ವೇತನ ಪಾವತಿ ಮಾಡಬೇಕು...ವಾರಕ್ಕೊಂದು ರಜೆ ಕೊಡಬೇಕು, ನಿವೃತ್ತಿವರೆಗೂ ಸೇವಾ ಭದ್ರತೆ ಕೊಡಬೇಕು....ಕನಿಷ್ಠ 31 ಸಾವಿರ ವೇತನ ನಿಗದಿ ಮಾಡಬೇಕು....ಹೀಗೆ ಹಲವು ಬೇಡಿಕೆಗಳೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಿದ್ದಾರೆ.
PublicNext
29/01/2025 03:12 pm