", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/39640520250129035356filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸುವ ಮೂಲಕ ಸಾಧನೆಯ ಗುರಿ ತಲುಪಬೇಕು ಎಂದು ದೇವರಾಜ ಅರಸು ಹಿಂದುಳಿದ ವರ್ಗಗಳ ತಾಲೂಕ...Read more" } ", "keywords": "Node,Chamarajnagar,Public-News", "url": "https://publicnext.com/node" } ಚಾಮರಾಜನಗರ : ವಿದ್ಯಾರ್ಥಿಗಳಿಗೆ ಗುರಿ ಮುಟ್ಟುವ ಛಲ ಇರಬೇಕು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ವಿದ್ಯಾರ್ಥಿಗಳಿಗೆ ಗುರಿ ಮುಟ್ಟುವ ಛಲ ಇರಬೇಕು

ಚಾಮರಾಜನಗರ : ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸುವ ಮೂಲಕ ಸಾಧನೆಯ ಗುರಿ ತಲುಪಬೇಕು ಎಂದು ದೇವರಾಜ ಅರಸು ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ಲಿಂಗರಾಜು ತಿಳಿಸಿದರು.

ನಗರದ ಬಿಸಿಎಂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಸಾಮರಸ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಹಳಷ್ಟು ಮಂದಿ ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಸ್ಥಾನ ಪಡೆದಿದ್ದಾರೆ. ಅದೇ ರೀತಿ ತಾವು ಸಹ ಇಲಾಖೆಯಿಂದ ನೀಡಿರುವ ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ಸ್ಥಾನ ಗಳಿಸಿಕೊಳ್ಳಬೇಕು. ಅಲ್ಲದೆ ಪಿಯುಸಿ ಮತ್ತು ಪದವಿ ಶಿಕ್ಷಣದಲ್ಲಿ ಹೆಚ್ಚು ಅಂಕಗಳಿಸಿದವರಿಗೆ ಪ್ರೋತ್ಸಾಹ ಧನ ಸಹ ನೀಡಲಾಗುತ್ತದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಆಸರೆ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಟಿ.ಜೆ.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಶ್ರದ್ಧೆ, ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಶಿಕ್ಷಣವೇ ಸಂಪತ್ತು ಎಂಬುದನ್ನು ಅರಿತು ಮುನ್ನಡೆಯಬೇಕು. ವಿದ್ಯಾರ್ಥಿ ಕಾಲಘಟ್ಟವು ಚಿನ್ನದಂತಹ ಜೀವನ ವಾಗಿದ್ದು, ಈ ಅವಧಿಯಲ್ಲಿ ವಿದ್ಯಾರ್ಜ ನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳೀಗೆ ಸಮಯದ ನಿರ್ವಹಣೆ ಮತ್ತು ಗುರಿ ಜೀವನದಲ್ಲಿ ಬಹಳ ಮುಖ್ಯ. ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ನಿಲಯಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ಕಟ್ಟಿಕೊಳ್ಳುವಂತಾಗಬೇಕು. ಹಾಸ್ಟೆಲ್ ಜೀವನವು ಒಬ್ಬರಿಗೊಬ್ಬರು ಹೊಂದಿಕೊಳ್ಳಲು ಮತ್ತು ಸಹಕರಿಸುವುದನ್ನು ಕಲಿಸುತ್ತದೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

29/01/2025 03:51 pm

Cinque Terre

580

Cinque Terre

0

ಸಂಬಂಧಿತ ಸುದ್ದಿ