", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/28305320250129051245filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ಜಿಲ್ಲಾಡಳಿತ ನಿಮ್ಮನ್ನು ಸಬಲಗೊಳಿಸುತ್ತದೆ. ಶಿಕ್ಷಕರು ಉತ್ತಮ ಫಲಿತಾಂಶ ನೀಡಬೇಕು.ಪ್ರತಿಯೊಬ್ಬ ವಿದ್ಯಾರ್ಥಿಗೆ ಎಸ್ಸೆಸ್ಸೆಲ್ಸಿ ಪರೀಕ್ಷ...Read more" } ", "keywords": "Node,Kolar,Others", "url": "https://publicnext.com/node" }
ಕೋಲಾರ : ಜಿಲ್ಲಾಡಳಿತ ನಿಮ್ಮನ್ನು ಸಬಲಗೊಳಿಸುತ್ತದೆ. ಶಿಕ್ಷಕರು ಉತ್ತಮ ಫಲಿತಾಂಶ ನೀಡಬೇಕು.ಪ್ರತಿಯೊಬ್ಬ ವಿದ್ಯಾರ್ಥಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು, ಕಲಿಕೆಯಲ್ಲಿ ಹಿನ್ನೆಡೆ ಕಂಡಿರುವ ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣಾ ಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಮಾರ್ಗದರ್ಶನ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ಕ್ಷೇತ್ರದಲ್ಲಿಯೂ ಒತ್ತಡ ಇರುವಂತೆ ಶಿಕ್ಷಣ ಕ್ಷೇತ್ರದಲ್ಲಿಯೂ ಒತ್ತಡದ ಪರಿಸ್ಥಿತಿ ಇದೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಸಾಮಾಜಿಕ ಸಮಸ್ಯೆ, ಕಲಿಕೆಗೆ ಅವಶ್ಯವಾದ ಮೂಲಸೌಲಭ್ಯಗಳಿಲ್ಲದಿರುವುದು ಸೇರಿದಂತೆ ಇತರೆ ಕಾರಣಗಳಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಲಿದೆ.
ಈ ಎಲ್ಲಾ ಸಮಸ್ಯೆಗಳನ್ನು ಮೀರಿ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕಾದ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಬ್ಬ ಶಿಕ್ಷಕರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
Kshetra Samachara
29/01/2025 05:13 pm