", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1738158553_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಡಿಕೇರಿ : ಫೈನಾನ್ಸ್, ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್ಗಳು ಭಾರತೀಯ ರಿಸರ್ವ್ ಬ್ಯಾಂಕ್ನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ...Read more" } ", "keywords": "Node,Kodagu,News", "url": "https://publicnext.com/node" }
ಮಡಿಕೇರಿ : ಫೈನಾನ್ಸ್, ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್ಗಳು ಭಾರತೀಯ ರಿಸರ್ವ್ ಬ್ಯಾಂಕ್ನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
RBI ಮಾರ್ಗಸೂಚಿ ಪ್ರಕಾರ 2 ಲಕ್ಷ ರೂ.ವರೆಗೆ ಮಾತ್ರ ಸಾಲ ನೀಡಬಹುದಾಗಿದೆ. ಆದರೆ ಸಾಲ ನೀಡುವಾಗ ಸಾಲ ಪಡೆಯುವವರು ಸಾಲ ಮರುಪಾವತಿ ಮಾಡುವ ಸಾಮಥ್ರ್ಯ ಇದೆಯೇ ಎಂದು ಗಮನಿಸಿ ಸಾಲವನ್ನು ನೀಡಬೇಕು. ಅದನ್ನು ಬಿಟ್ಟು ಕಿರುಕುಳ ನೀಡುವುದು ಸರಿಯಲ್ಲ ಎಂದು ಹೇಳಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸುವುದು ಎಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ತಾವೂ ಸಹ(ಪೈನಾನ್ಸ್ ಕಂಪನಿಗಳು) ಕಾನೂನು ನಿಯಮಾನುಸಾರ ನಡೆದುಕೊಳ್ಳಬೇಕು. ಅದು ಬಿಟ್ಟು ದೌರ್ಜನ್ಯ ನಡೆಯುವುದು ಕಂಡುಬಂದರೆ ನಿಯಮಾನುಸಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಪ್ರತಿಯೊಬ್ಬರಲ್ಲಿಯೂ ಆರ್ಥಿಕ ಶಿಸ್ತು ಇರಬೇಕು. ಅದನ್ನು ಬಿಟ್ಟು ಹೆಚ್ಚುವರಿ ಸಾಲವನ್ನು ನೀಡುವುದು. 5 ಗಂಟೆಯ ನಂತರ ಸಾಲ ವಸೂಲಾತಿ ಮಾಡಲು ಹೋಗುವುದು. ಇಂತಹ ಪ್ರಕರಣಗಳು ವರದಿಯಾಗಬಾರದು. ಎಲ್ಲರ ರಕ್ಷಣೆ ಅತ್ಯಗತ್ಯ. ಆ ನಿಟ್ಟಿನಲ್ಲಿ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಸಾಲ ವಸೂಲಾತಿ ಮಾಡುವಾಗ ಹೆದರಿಸಬಾರದು. ಹೆದರಿಸುವುದು ಕಂಡುಬಂದಲ್ಲಿ ಸೋ-ಮೋಟೋ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದರು.
Kshetra Samachara
29/01/2025 07:19 pm