", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1738158862_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಡಿಕೇರಿ: ಕಾವೇರಿ ಕ್ಷೇತ್ರ ಭಾಗಮಂಡಲದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲ್ಸೆತುವೆಯನ್ನು ಜ.31 ರಂದು ರಾಜ್ಯದ ಮುಖ್ಯ...Read more" } ", "keywords": "Node,Kodagu,News", "url": "https://publicnext.com/node" } ಮಡಿಕೇರಿ: ಜ.31 ರಂದು ಮುಖ್ಯಮಂತ್ರಿಗಳಿಂದ ಭಾಗಮಂಡಲ ಸೇತುವೆ ಉದ್ಘಾಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಜ.31 ರಂದು ಮುಖ್ಯಮಂತ್ರಿಗಳಿಂದ ಭಾಗಮಂಡಲ ಸೇತುವೆ ಉದ್ಘಾಟನೆ

ಮಡಿಕೇರಿ: ಕಾವೇರಿ ಕ್ಷೇತ್ರ ಭಾಗಮಂಡಲದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲ್ಸೆತುವೆಯನ್ನು ಜ.31 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಮೇಲ್ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕಾ ಇಲಾಖಾ ಸಚಿವ ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳನ್ನು ಕೊಡಗು ಜಿಲ್ಲಾ ಕಾಂಗ್ರೆಸ್‌ನ ಪದಾಧಿಕಾರಿಗಳು, ಕಾರ್ಯಕರ್ತರು, ಭಾಗಮಂಡಲದ ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

29/01/2025 07:24 pm

Cinque Terre

1,000

Cinque Terre

0

ಸಂಬಂಧಿತ ಸುದ್ದಿ