ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಪಿಎಂ ಕಿರು ಆಹಾರ ಸಂಸ್ಕರಣಾ ಯೋಜನೆಯಿಂದ ಉದ್ಯೋಗ ಸೃಷ್ಟಿ- ಸಂಸದ ಪೂಜಾರಿ

ಚಿಕ್ಕಮಗಳೂರು : ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜರಿ ಹೇಳಿದರು. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತ್ತಿಚ್ಚಿನ ದಿನಗಳಲ್ಲಿ ಸ್ವಂತ ಉದ್ಯೋಗ ಮತ್ತು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿ ಬದುಕುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕದಿಂದ ಒಂದಿಷ್ಟು ಉದ್ಯೋಗ ಸೃಷ್ಟಿ ಮಾಡಬಹುದು ಎಂದರು. ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ ಅಧ್ಯಕ್ಷತೆ ವಹಿಸಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ರೈತರಿಗೆ ಹಾಗೂ ಸ್ವಂತ ಉದ್ಯೋಗ ಮಾಡುವವರಿಗೆ ಅನುಕೂಲವಾಗಲು ಇಂತಹ ಯೋಜನೆಗಳನ್ನು ಜಾರಿ ತಂದಿದೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

29/01/2025 08:12 pm

Cinque Terre

2.02 K

Cinque Terre

0

ಸಂಬಂಧಿತ ಸುದ್ದಿ