", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/222042-1738163235-WhatsApp-Image-2025-01-29-at-7.26.46-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕ...Read more" } ", "keywords": "Shivamogga, reserved sand mine, Gurudatt Hegde, sand mining, Karnataka government, district administration, sand mafia, mining regulations, environmental conservation. ,Shimoga,Law-and-Order,Government", "url": "https://publicnext.com/node" }
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.
ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗಣಿಯನ್ನು ಕಾಯ್ದಿರಿಸಲು ಕೋರಿಕೆ ಸಲ್ಲಿಸಿದ ಇಲಾಖಾಧಿಕಾರಿಗಳು ಸಲ್ಲಿಸಿದ ಕೋರಿಕೆಯನ್ನು ಪರಿಶೀಲಿಸಿ, ತಮ್ಮ ಕೋರಿಕೆಯ ಗಣಿಯನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗುವುದು ಎಂದರು.
ಗಣಿಯನ್ನು ಬಳಸಿಕೊಳ್ಳಲು ಕೋರಿಕೆ ಸಲ್ಲಿಸಿದ ಇಲಾಖಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಬೇಕಾದ ಮರಳಿನ ಪ್ರಮಾಣವನ್ನು ಲಿಖಿತವಾಗಿ ಬರೆದುಕೊಡಬೇಕು. ಗಣಿಯನ್ನು ದುರ್ಬಳಕೆ ಮಾಡಿದಲ್ಲಿ ಸಂಬಂದಿಸಿದ ಇಲಾಖಾ ಮುಖ್ಯಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು. ಮರಳನ್ನು ಉದ್ದೇಶಿಕ ಕಾರ್ಯಕ್ಕೆ ಬಳಸಿಕೊಳ್ಳಬೇಕು. ನೆರೆಯ ಜಿಲ್ಲೆಗಳಿಗೇ ರವಾನಿಸಿದಲ್ಲಿ, ದುರ್ಬಳಕೆ ಮಾಡಿಕೊಂಡ ಬಗ್ಗೆ ಮಾಹಿತಿ ದೊರೆತಲ್ಲಿ ಅಂತಹ ಅಧಿಕಾರಿ-ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದ ಅವರು, ಮರಳು ಗಣಿಗಾರಿಕೆ ಕೈಗೊಳ್ಳುವ ಸ್ಥಳದಲ್ಲಿ ಸಿ.ಸಿ.ಕ್ಯಾಮರಾಗಳ ಅಳವಡಿಕೆ ಮಾಡಿಕೊಳ್ಳಬೇಕು. ಅಗತ್ಯವಿರುವಾಗ ಸಿಸಿ.ಕ್ಯಾಮರಾ ಚಿತ್ರೀಕರಣದ ಪ್ರತಿಯನ್ನು ಸಂಬಂದಿಸಿದ ಇಲಾಖೆಗೆ ಒದಗಿಸಲು ಬದ್ದರಾಗಿರಬೇಕು ಎಂದರು.
ಕಾಯ್ದಿರಿಸಿದ ಗಣಿಗಳಲ್ಲದೆ ಉಳಿದ ಗಣಿಗಳನ್ನು ನಿಯಮಾನುಸಾರ ವಿಲೇ ಮಾಡುವಂತೆ ಜಿಲ್ಲಾ ಹಿರಿಯ ಭೂವಿಜ್ಞಾನಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಶಿವಮೊಗ್ಗ-ಭದ್ರಾವತಿ ತಾಲೂಕುಗಳ ವ್ಯಾಪ್ತಿಯಲ್ಲಿ ಹರಿಯುವ ತುಂಗ-ಭದ್ರಾ ನದಿ ಪ್ರದೇಶದಲ್ಲಿ ಯಾಂತ್ರಿಕ ದೋಣಿಗಳನ್ನು ಬಳಸಿ, ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದು, ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಗಣಿಗಳಿಂದ ಮರಳು ಸಾಗಾಣಿಕೆ ನಡೆಸುವ ಗುತ್ತಿಗೆದಾರರು ತಮ್ಮ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಿರಬೇಕು.ಸ್ವಂತದ್ದಾಗಿರುವ ವೇಬ್ರಿಡ್ಜ್ ಹೊಂದಿರಬೇಕು. ಎನ್.ಜಿ.ಟಿ.ನಿಯಮಾನುಸಾರ ಯಂತ್ರಗಳನ್ನು ಬಳಸಬಾರದು. ಮಾನವ ಸಂಪನ್ಮೂಲವನ್ನೇ ಬಳಸಿ ಗಣಿಗಾರಿಕೆ ನಡೆಸಬೇಕು. ಐ.ಎಲ್ಎಂ.ಎಸ್.ನೋಂದಣಿ ಕಡ್ಡಾಯವಾಗಿ ಮಾಡಿಕೊಂಡಿರಬೇಕು ಹಾಗೂ ಮರಳು ದಾಸ್ತಾನಿಗೆ ಸ್ಥಳವನ್ನು ಹೊಂದಿರಬೇಕು ಎಂದರು.
PublicNext
29/01/2025 08:37 pm