", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1738169213-WhatsApp-Image-2025-01-29-at-10.10.41-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಿದ್ದಾರೆ ಎಂಬ ಆರೋಪದ ಮೇಲೆ ಹಾಲಿ ಶಾ...Read more" } ", "keywords": "Dharwad, Vinay Kulkarni, Witness Tampering Case, High Court, Karnataka News, Indian Politics, BJP Leader, Yogeshgouda Goudar Murder Case, Crime News.,Hubballi-Dharwad,Politics,Crime,Law-and-Order", "url": "https://publicnext.com/node" }
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಿದ್ದಾರೆ ಎಂಬ ಆರೋಪದ ಮೇಲೆ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರ ಮೇಲೆ 2020ರ ಡಿ.4 ರಂದು ಧಾರವಾಡದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿಯಲ್ಲಿ ಪಿಸಿಆರ್ ಸಂಖ್ಯೆ 337ರ ಅಡಿ ದಾಖಲಾಗಿದ್ದ ಸಾಕ್ಷಿ ನಾಶ ಪ್ರಕರಣವನ್ನು ಧಾರವಾಡ ಹೈಕೋರ್ಟ್ ರದ್ದುಗೊಳಿಸಿದೆ.
ಯೋಗೀಶಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಅವರು ಸಾಕ್ಷಿ ನಾಶ ಮಾಡಿದ್ದಾರೆ ಎಂದು ಸಿಬಿಐ ಅವರ ಮೇಲೆ ಸಾಕ್ಷಿ ನಾಶ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ಧಾರವಾಡ ನ್ಯಾಯಾಲಯದಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅವರು ವರ್ಗಾವಣೆ ಮಾಡಿಸಿಕೊಂಡಿದ್ದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಅರ್ಜಿಯ ವಿಚಾರಣೆ ನಡೆಯುತ್ತಿರುವಾಗಲೇ ತಮ್ಮ ಮೇಲೆ ದಾಖಲಾಗಿದ್ದ ಸಾಕ್ಷಿ ನಾಶ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ವಿನಯ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿ, ವಿನಯ್ ಕುಲಕರ್ಣಿ ಅವರ ಮೇಲಿದ್ದ ಸಾಕ್ಷಿ ನಾಶ ಪ್ರಕರಣವನ್ನು ರದ್ದುಗೊಳಿಸಿದೆ. ಸದ್ಯಕ್ಕೆ ವಿನಯ್ ಅವರಿಗೆ ಇದರಿಂದ ಕೊಂಚ ರಿಲೀಫ್ ಸಿಕ್ಕಂತಾಗಿದ್ದು, ಈ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ಗೆ ಹೋಗುವ ಸಾಧ್ಯತೆ ಇದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/01/2025 10:19 pm