ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಬಮ್ಮಿಗಟ್ಟಿ ಆರೋಗ್ಯ ಕೇಂದ್ರ ಅವ್ಯವಸ್ಥೆ- ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ

ಕಲಘಟಗಿ: ತಾಲೂಕಿನ ಬಮ್ಮಿಗಟ್ಟಿ ಗ್ರಾಮದಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದರು.

ಆಸ್ಪತ್ರೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಗಮಿಸುತ್ತಿಲ್ಲ. ಇಲ್ಲಿ ಸಿಬ್ಬಂದಿ ಕೊರತೆ ಇದ್ದು, ಇದ್ದ ಸಿಬ್ಬಂದಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಅಲ್ಲದೆ, ಇಲ್ಲಿ ಗರ್ಭಿಣಿಯರಿಗೆ ಸರಿಯಾದ ಚಿಕಿತ್ಸೆ ನೀಡದೆ ಬೇರೆ ಆಸ್ಪತ್ರೆಗೆ ಕಳುಹಿಸಿ ಕೊಡುತ್ತಾರೆ ಎಂದು ತಿಳಿಸಿದರು.

ಇಲ್ಲಿ ಕಳೆದ 10 ವರ್ಷದಿಂದಲೂ ಇದೇ ಸಮಸ್ಯೆ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಲ್ಲಿ ಹಲವು ಬಾರಿ ಅವಧಿ ಮೀರಿದ ಔಷಧ ನೀಡಿ ಸಮಸ್ಯೆಗಳಾಗಿವೆ. ಈ ಕುರಿತು ತಾಲೂಕು ವೈದ್ಯಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಫೆ.15ರೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಆಸ್ಪತ್ರೆಗೆ ಬೀಗ ಜಡಿಯುವುದರ ಜೊತೆಗೆ ರಾಜ್ಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

ವರದಿ : ಉದಯ ಗೌಡರ, ಪಬ್ಲಿಕ್ ನೆಕ್ಸ್ಟ್ ಕಲಘಟಗಿ

Edited By : Shivu K
Kshetra Samachara

Kshetra Samachara

30/01/2025 08:26 am

Cinque Terre

56.07 K

Cinque Terre

0

ಸಂಬಂಧಿತ ಸುದ್ದಿ