", "articleSection": "Viral", "image": { "@type": "ImageObject", "url": "https://prod.cdn.publicnext.com/s3fs-public/222042-1738209019-WhatsApp-Image-2025-01-30-at-8.31.39-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮೌಲಾನಾ ಅಬುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯದ ತರಗತಿಯಲ್ಲಿ ಮಹಿಳಾ ಪ್ರಾಧ್ಯಾಪಕಿಯೊಬ್ಬರು ವಿದ್ಯಾರ...Read more" } ", "keywords": "West Bengal professor, student marriage video, college classroom wedding, probe ordered, Maulana Abul Kalam Azad University of Technology, MAKAUT, Psychology Department controversy, viral video, education news, Indian university news ,,Viral", "url": "https://publicnext.com/node" }
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮೌಲಾನಾ ಅಬುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯದ ತರಗತಿಯಲ್ಲಿ ಮಹಿಳಾ ಪ್ರಾಧ್ಯಾಪಕಿಯೊಬ್ಬರು ವಿದ್ಯಾರ್ಥಿನಿಯನ್ನು ವಿವಾಹವಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಈ ಬೆನ್ನಲ್ಲೇ ವಿಶ್ವವಿದ್ಯಾಲಯವು ತನಿಖೆಗೆ ಆದೇಶ ನೀಡಿದೆ.
ಪ್ರಥಮ ವರ್ಷದ ವಿದ್ಯಾರ್ಥಿ ಹಾಗೂ ಲೇಡಿ ಪ್ರೊಫೆಸರ್ ವಧುವರರಂತೆ ತಯಾರಾಗಿ ಮದುವೆ ಆಗಿದ್ದಾರೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮದುವೆಗೆ ಇಬ್ಬರು ಸಾಕ್ಷಿಗಳ ಸಹಿಯೊಂದಿಗೆ ವಿಶ್ವವಿದ್ಯಾಲಯದ ಪ್ಯಾಡ್ನಲ್ಲಿ ಗಂಡ ಮತ್ತು ಹೆಂಡತಿಯ ಲಿಖಿತ ಒಪ್ಪಂದವಿದೆ ಅನ್ನೋದು ಗಮನಾರ್ಹ. ವಿಡಿಯೋ ವೈರಲ್ ಬೆನ್ನಲ್ಲೇ ವಿಶ್ವವಿದ್ಯಾಲಯ ಕೈಗೊಂಡ ತನಿಖೆಯಲ್ಲಿ ಮದುವೆಯ ಸತ್ಯ ಬೆಳಕಿಗೆ ಬಂದಿದೆ.
ಹೌದು. ವಿಡಿಯೋ ವೈರಲ್ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲಯ, 'ಇದೊಂದು ಪ್ರಾಜೆಕ್ಟ್ಗೆ ಸಂಬಂಧಿಸಿದ ನಾಟಕ ಅಷ್ಟೇ. ನಾಟಕ ರೂಪದಲ್ಲಿ ಮಕ್ಕಳಿಗೆ ಮಾನಸಿಕ ಶಿಕ್ಷಣ ಕೊಡಿಸುವ ಉದ್ದೇಶದಿಂದ ಇದನ್ನು ತಮಾಷೆಯಾಗಿ ಮಾಡಲಾಗಿದೆ. ಕೆಲವರು ಉದ್ದೇಶಪೂರ್ವಕವಾಗಿ ನಾಟಕದ ಒಂದು ಭಾಗವನ್ನು ಮಾತ್ರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಘಟನೆ ಕುರಿತು ಉನ್ನತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ' ಎಂದು ಸ್ಪಷ್ಟನೆ ನೀಡಿದೆ.
PublicNext
30/01/2025 09:20 am