ಬೀದರ್ : ಕಾರು ಮತ್ತು ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೆಡ್ ಬಿ ಗ್ರಾಮದ ಹತ್ತಿರ ನಡೆದಿದೆ.
ಕಲಬುರಗಿ ಜಿಲ್ಲೆ ಕಮಲಾಪೂರ ತಾಲ್ಲೂಕಿನ ನಾಗೂರ ಗ್ರಾಮದ ನಿವಾಸಿಯಾದ ಜಗನ್ನಾಥ್ (35) ಹಾಗೂ ಬೀದರ್‌ನ ಎಂ.ಡಿ. ಇಸ್ಮಾಯಿಲ್ (45) ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ.
ಇಂದು ಮಧ್ಯಾಹ್ನ ಹಳ್ಳಿಖೆಡ್ ನ ಬಿ ಎಸ್ ಎಸ್ ಕೆ ಸಕ್ಕರೆ ಕಾರ್ಖಾನೆ ಹತ್ತಿರದ ಇರುವ ಬ್ರಿಡ್ಜ್ ಮೇಲೆ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿದ ಹಳ್ಳಿಖೆಡ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
PublicNext
30/01/2025 11:59 am