", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/222042-1738221466-Add-a-heading---2025-01-17T151147.939.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ದರ ಏರಿಕೆ ಶಾಕ್ ಕೊಡಲು ಮುಂದಾಗಿತ್ತು. ಫೆಬ್ರವರಿ 1ರಿಂದ ನಮ್ಮ ಮೆಟ್ರೋ ಟಿಕೆಟ್ ದರ...Read more" } ", "keywords": "Namma Metro, Bengaluru Metro, fare hike, Central government intervention, temporary stay, public transportation, Karnataka news, Bangalore Metro news, fare revision. ,Bangalore,Bangalore-Rural,Infrastructure,Government", "url": "https://publicnext.com/node" } ನಮ್ಮ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಮ್ಮ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ದರ ಏರಿಕೆ ಶಾಕ್ ಕೊಡಲು ಮುಂದಾಗಿತ್ತು. ಫೆಬ್ರವರಿ 1ರಿಂದ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಬಿಎಂಆರ್‍‌ಸಿಎಲ್ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ.

ದರ ಏರಿಕೆ ಸಂಬಂಧ ಕೇಂದ್ರ ಸರ್ಕಾರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್‌ (BMRCL)ಗೆ ನಿರ್ದೇಶನ ನೀಡಿದೆ.

ಜನವರಿ 17 ರಂದು ಬಿಎಂಆರ್‌ಸಿಎಲ್‌ನ ದರ ನಿಗಧಿ ಸಮಿತಿ ಮಹತ್ವದ ಸಭೆ ನಡೆಸಿತ್ತು. ಈ ಸಭೆಯಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆಗೆ ಚರ್ಚೆ ನಡಸಲಾಗಿತ್ತು. ಬಳಿಕ ಒಮ್ಮತವಾಗಿ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲು ನಿರ್ಧರಿಸಿತ್ತು. ಶೇಕಡಾ 45 ರಷ್ಟು ಟಿಕೆಟ್ ದರ ಏರಿಕೆ ಮಾಡಲು ಮೆಟ್ರೋ ದರ ಸಮಿತಿ ಶಿಫಾರಸ್ಸು ಮಾಡಿತ್ತು. ಈ ಶಿಫಾಸ್ಸಿನ ಪ್ರಕಾರ ಬಿಎಂಆರ್‌ಸಿಎಲ್ ಫೆಬ್ರವರಿ 1 ರಿಂದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿತ್ತು. ಮೆಟ್ರೋದ ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ಸಂಸದ ಪಿಸಿ ಮೋಹನ್ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದರು. ಇದೀಗ ಕೇಂದ್ರ ಸರ್ಕಾರ ಬಿಎಂಆರ್‌ಸಿಎಲ್ ಪ್ರಯಾಣದರ ಏರಿಕೆ ನಿರ್ಧಾರಕ್ಕೆ ಬ್ರೇಕ್ ಹಾಕಿದೆ.

Edited By : Vijay Kumar
Kshetra Samachara

Kshetra Samachara

30/01/2025 12:48 pm

Cinque Terre

492

Cinque Terre

0

ಸಂಬಂಧಿತ ಸುದ್ದಿ