", "articleSection": "Health & Fitness", "image": { "@type": "ImageObject", "url": "https://prod.cdn.publicnext.com/s3fs-public/387839-1738228036-WhatsApp-Image-2025-01-30-at-1.12.15-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MohanKrishnaShivamogga" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಕುಷ್ಠರೋಗ ಅಂಟು ರೋಗವಲ್ಲ. ಈ ರೋಗದ ಬಗ್ಗೆ ತಾರತಮ್ಯ, ಬೇಧ-ಭಾವ ಬೇಡ. ಆದರೆ ಕುಷ್ಠರೋಗ ಇರುವ ವ್ಯಕ್ತಿ ಕೆಮ್ಮುವಾಗ ಅಥವಾ ಸೀನಿದಾಗ ಇ...Read more" } ", "keywords": "Shivamogga, National Leprosy Awareness Campaign, Cycle Rally, Walkathon, Leprosy Eradication, Health Awareness, Karnataka News, Social Cause, Disability Support.,Shimoga,Health-and-Fitness", "url": "https://publicnext.com/node" }
ಶಿವಮೊಗ್ಗ : ಕುಷ್ಠರೋಗ ಅಂಟು ರೋಗವಲ್ಲ. ಈ ರೋಗದ ಬಗ್ಗೆ ತಾರತಮ್ಯ, ಬೇಧ-ಭಾವ ಬೇಡ. ಆದರೆ ಕುಷ್ಠರೋಗ ಇರುವ ವ್ಯಕ್ತಿ ಕೆಮ್ಮುವಾಗ ಅಥವಾ ಸೀನಿದಾಗ ಇನ್ನೊಬ್ಬರಿಗೆ ಹರಡಬುದಾದ್ದರಿಂದ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮ ಶಿವಮೊಗ್ಗ, ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇವರುಗಳ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಹಸಿರು ನಿಶಾನೆಯ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ 53 ಕುಷ್ಠರೋಗ ಪ್ರಕರಣಗಳು ಇವೆ. ಇದಲ್ಲದೇ ಏಪ್ರಿಲ್ ನಿಂದ ಇಲ್ಲಿಯವರೆಗೂ 32 ಪ್ರಕರಣಗಳನ್ನು ಪತ್ತೆ ಹಚ್ಚಿದ್ದೇವೆ. ಅದರಲ್ಲಿ ಶಿಕಾರಿಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ ಎಂದರು.
ಇದೇ ವೇಳೆ ಕುಷ್ಟರೊಗ ಜಾಗೃತಿ ಕುರಿತು ಸೈಕಲ್ ಜಾಥಾ ಕೈಗೊಳ್ಳಲಾಯಿತು. ಹಾಗೂ ಕುಷ್ಟರೋಗ ಜಾಗೃತಿ ಆಂದೋಲನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
Kshetra Samachara
30/01/2025 02:37 pm